Advertisement

ಅರವಿಂದ್ ಕೇಜ್ರಿವಾಲ್ 3.0: ರಾಮ್ ಲೀಲಾ ಮೈದಾನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ

09:43 AM Feb 17, 2020 | Mithun PG |

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀದೊಡ್ಡ ಪಕ್ಷವಾಗಿ ಮೂಡಿಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇಂದು  ಬೆಳಿಗ್ಗೆ 10 ಗಂಟೆಗೆ ಐತಿಹಾಸಿಕ ರಾಮ್‌ ಲೀಲಾ ಮೈದಾನದಲ್ಲಿ ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

‘ಧನ್ಯವಾದಗಳು ದೆಹಲಿ’ ಎಂಬ ಸಂದೇಶಗಳನ್ನು ಹೊಂದಿರುವ ಹಲವಾರು ಬ್ಯಾನರ್‌ಗಳು ರಾಮ್‌ ಲೀಲಾ ಮೈದಾನದಲ್ಲಿ ರಾರಾಜಿಸುತ್ತಿದ್ದು, ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮುಕ್ತವಾಗಿದೆ. ಹೆಚ್ಚಿನ ಸಂಖ್ಯೆಯ ಜನರು ಸೇರುತ್ತಾರೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಹಿರಿಯ ಆಪ್ ಪಕ್ಷದ ಮುಖ್ಯಸ್ಥ ಗೋಪಾಲ್ ರೈ ತಿಳಿಸಿದ್ದಾರೆ.

ಹಿಂದಿನ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಎಲ್ಲ ಆರು ಮಂತ್ರಿಗಳಾದ ಮನೀಶ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಗೌತಮ್ ಸಹ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೂ , ಅರವಿಂದ್ ಕೇಜ್ರಿವಾಲ್  ಆಹ್ವಾನ ನೀಡಿದ್ದು ಆದರೆ ಪ್ರಧಾನಿ ಭಾನುವಾರ ತಮ್ಮ ತವರು ಕ್ಷೇತ್ರವಾದ ವಾರಣಾಸಿಯಲ್ಲಿರುತ್ತಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next