Advertisement

ಆಮ್ ಆದ್ಮಿ ಪಕ್ಷಕ್ಕೆ ಬಹುಮತ: ದೆಹಲಿ ಮಹಾನಗರ ಪಾಲಿಕೆಯ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

02:53 PM Dec 07, 2022 | Team Udayavani |

ನವದೆಹಲಿ:ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ಕಳೆದ 15 ವರ್ಷಗಳಿಂದ ಮಹಾನಗರ ಪಾಲಿಕೆಯ ಆಡಳಿತ ಚುಕ್ಕಾಣಿ ಹಿಡಿದಿದ್ದ ಭಾರತೀಯ ಜನತಾ ಪಕ್ಷದ ಅಧಿಕಾರ ಕೈತಪ್ಪಿದಂತಾಗಿದೆ.

Advertisement

ಇದನ್ನೂ ಓದಿ:ಸುರತ್ಕಲ್: ಆಸ್ಪತ್ರೆಯಲ್ಲಿ ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಬಂಧನ

250 ವಾರ್ಡ್ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್ ಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿದೆ. ಭಾರತೀಯ ಜನತಾ ಪಕ್ಷ 105 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 8 ವಾರ್ಡ್ ಗಳಲ್ಲಿ ಜಯಗಳಿಸಿ ಮೂರನೇ ಸ್ಥಾನ ಪಡೆದುಕೊಂಡಿದೆ.

250 ವಾರ್ಡ್ ಗಳ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು 126 ಸದಸ್ಯರ ಬಹುಮತ ಬೇಕಾಗಿದೆ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್ ಗಳಲ್ಲಿ ಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಂತಾಗಿದೆ.

ಬುಧವಾರ(ಡಿಸೆಂಬರ್ 07) ಬೆಳಗ್ಗೆ 8ಗಂಟೆಗೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಆರಂಭಗೊಂಡಿತ್ತು. ಆರಂಭಿಕ ಮತಎಣಿಕೆಯಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಆಮ್ ಆದ್ಮಿ ಪಕ್ಷ ಭಾರೀ ಮುನ್ನಡೆ ಪಡೆದುಕೊಂಡಿತ್ತು. ಚುನಾವಣೆ ಬಳಿಕ ನಡೆದ ಮತಗಟ್ಟೆ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿತ್ತು.

Advertisement

ಈ ವರ್ಷದ ಆರಂಭದಲ್ಲಿ ದೆಹಲಿ ಮಹಾನಗರ ಪಾಲಿಕೆಯನ್ನು ಪುನರ್ ರಚಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ. 2017ರಲ್ಲಿ 270 ವಾರ್ಡ್ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 181 ವಾರ್ಡ್ ಗಳಲ್ಲಿ ಆಮ್ ಆದ್ಮಿ ಪಕ್ಷ 48 ವಾರ್ಡ್ ಗಳಲ್ಲಿ ಹಾಗೂ ಕಾಂಗ್ರೆಸ್ 30 ವಾರ್ಡ್ ಗಳಲ್ಲಿ ಜಯ ಸಾಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next