ನವದೆಹಲಿ :ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಎದುರಿಸಲು ತಮ್ಮ ಪಕ್ಷವು ಸಿದ್ಧವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಟ್ವೀಟ್ ಮಾಡಿದ್ದಾರೆ.
ಯುಪಿ ಮತ್ತು ಪಂಜಾಬ್ ಅಸೆಂಬ್ಲಿಗಳ ಜೊತೆಗೆ ಉತ್ತರಾಖಂಡ, ಮಣಿಪುರ ಮತ್ತು ಗೋವಾ ಸೇರಿದಂತೆ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಘೋಷಿಸಿದ ಬೆನ್ನಲ್ಲೇ ಎಎಪಿ ರಾಷ್ಟ್ರೀಯ ಸಂಚಾಲಕರು ಈ ಟ್ವೀಟ್ ಮಾಡಿದ್ದಾರೆ.
ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಆಮ್ ಆದ್ಮಿ ಪಕ್ಷ ಸಿದ್ಧವಾಗಿದೆ’ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಮಣಿಪುರ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಸ್ಪರ್ಧಿಸಲು ಎಎಪಿ ನಿರ್ಧರಿಸಿದೆ. ಪಂಜಾಬ್ ನಲ್ಲಿ ಈ ಬಾರಿ ಅಧಿಕಾರ ಹಿಡಿಯಲೇ ಬೇಕು ಎಂದು ಭಾರಿ ಪ್ರಯತ್ನ ಮಾಡುತ್ತಿದೆ. ಗೋವಾ ದಲ್ಲೂ ಪಕ್ಷ ಮತದಾರರ ಮನವೊಲಿಸಲು ಭಾರಿ ಪ್ರಯತ್ನಗಳನ್ನು ಮಾಡುತ್ತಿದೆ.
Related Articles
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರುಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಮಾರ್ಚ್10 ರಂದು ಫಲಿತಾಂಶ ಹೊರಬರಲಿದೆ.