Advertisement

AAP Kisan Wing Leader: ಆಪ್ ನಾಯಕನ ಗುಂಡಿಕ್ಕಿ ಹತ್ಯೆ… ರಸ್ತೆ ಬದಿಯಲ್ಲಿತ್ತು ದೇಹ

10:13 AM Sep 10, 2024 | Team Udayavani |

ಪಂಜಾಬ್ : ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ತರ್ಲೋಚನ್ ಸಿಂಗ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಪಂಜಾಬ್‌ನ ಲುಧಿಯಾನದ ಖನ್ನಾದಲ್ಲಿ ಸೋಮವಾರ (ಸೆ.9) ಸಂಜೆ ನಡೆದಿದೆ.

Advertisement

ಇಕೊಲಾಹ ಗ್ರಾಮದ ನಿವಾಸಿ ತರ್ಲೋಚನ್ ಸಿಂಗ್ (60) ಅವರು ತಮ್ಮ ಜಮೀನಿನಿಂದ ಮನೆಗೆ ಮರಳುತ್ತಿದ್ದಾಗ ದಾಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ತರ್ಲೋಚನ್ ಸಿಂಗ್ ಖನ್ನಾದಲ್ಲಿ ಆಮ್ ಆದ್ಮಿ ಪಕ್ಷದ ಕಿಸಾನ್ ವಿಭಾಗದ ಅಧ್ಯಕ್ಷರಾಗಿದ್ದರು ಎಂದು ಹೇಳಲಾಗಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

Advertisement
Advertisement

Udayavani is now on Telegram. Click here to join our channel and stay updated with the latest news.