ಬೆಂಗಳೂರು: ರಾಜ್ಯಸಭಾ ಸದಸ್ಯ ಹಾಗೂ ಎಎಪಿ ಹಿರಿಯ ಮುಖಂಡ ಸಂಜಯ್ ಸಿಂಗ್ ಬುಧವಾರ ಪುಲಕೇಶಿ ನಗರದಲ್ಲಿ ಪಕ್ಷದ ಅಭ್ಯರ್ಥಿ ಪರ ರೋಡ್ ಶೋ ನಡೆಸಲಿದ್ದಾರೆ. ಜತೆಗೆ ಸಂಜೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Advertisement
ವಿಧಾನ ಸಭಾ ಚುನಾವಣೆ ಹಿನ್ನೆಲೆ 2 ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾ.30 ರಂದು ಮೈಸೂರಿಗೆ ತೆರಳಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಎಎಪಿಯ ಪ್ರಕಟಣೆ ತಿಳಿಸಿದೆ.