Advertisement

ವಿಕೆ ಸಕ್ಸೇನಾ ರಾಜೀನಾಮೆಗೆ ಆಗ್ರಹಿಸಿ ಆಪ್ ಶಾಸಕರಿಂದ ವಿಧಾನಸಭೆಯೊಳಗೆ ಅಹೋರಾತ್ರಿ ಪ್ರತಿಭಟನೆ

08:59 AM Aug 30, 2022 | Team Udayavani |

ನವದೆಹಲಿ : ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ವಿಧಾನಸಭೆಯೊಳಗೆ ಎಎಪಿ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

Advertisement

ಇದರೊಂದಿಗೆ ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ನಡುವಿನ ಸಮರ ಮತ್ತಷ್ಟು ಉಲ್ಬಣಗೊಂಡಿದೆ. ಆಪ್ ಶಾಸಕರು ಸೋಮವಾರ ಅಹೋರಾತ್ರಿ ವಿಧಾನ ಸಭೆಯೊಳಗೆ ಪ್ರತಿಭಟನೆ ನಡೆಸಿ ವಿಕೆ ಸಕ್ಸೇನಾ ಅವರು ರಾಜಿನಾಮೆಗೆ ನೀಡಲು ಪಟ್ಟುಹಿಡಿದ್ದಾರೆ.

ಸಕ್ಸೇನಾ ಅವರು 2016 ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ತಮ್ಮ ಉದ್ಯೋಗಿಗಳಿಗೆ 1,400 ಕೋಟಿ ರೂ. ಮೌಲ್ಯದ ನೋಟುಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು ಎಂದು ಎಎಪಿ ಶಾಸಕರು ಆರೋಪಿಸಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಶಾಸಕರು ಭ್ರಷ್ಟಾಚಾರದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಂಪುಟ ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next