ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.
“ಅಪ್ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದು ಅವರ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಅವರನ್ನು ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಚಡ್ಡಾ ಅವರನ್ನು ರಾಜ್ಯಸಭಾ ನಾಯಕನನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.
ರಾಜ್ಯಸಭೆಯ ಅತ್ಯಂತ ಕಿರಿಯ ಸದಸ್ಯರಲ್ಲಿ ರಾಘವ್ ಚಡ್ಡಾ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಆಪ್ ಒಟ್ಟು 10 ಮಂದಿ ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ಬಳಿಕ ಆಪ್ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿರುವ ಪಕ್ಷವಾಗಿದೆ.
ಇದನ್ನೂ ಓದಿ: ಶಬರಿಮಲೆಯಲ್ಲಿ ಪಿಣರಾಯ್ ಸರ್ಕಾರ ಮೂರು ಕಾಸಿನ ಕೆಲಸ ಮಾಡಿಲ್ಲ- ಆರಗ ಜ್ಞಾನೇಂದ್ರ