ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪತನಗೊಳ್ಳಲಿದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ಸರಕಾರ ರಚಿಸಿದ ಬಗ್ಗೆ ಪ್ರಯಾಗ್‌ರಾಜ್‌ನಲ್ಲಿರುವ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್, ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ. ಎನ್‌ಡಿಎ ಘಟಕಗಳ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗುವ ಎಲ್ಲಾ ಸಾಧ್ಯತೆಯಿದೆ ಎಂದು ಅವರು ಹೇಳಿದರು.
72 ಸದಸ್ಯರ ಯೂನಿಯನ್ ಕೌನ್ಸಿಲ್ ಆಫ್ ಮಿನಿಸ್ಟರ್‌ಗಳ ನೇತೃತ್ವದ ದಾಖಲೆಯ ಮೂರನೇ ಅವಧಿಗೆ ಮೋದಿ ಅವರು ಭಾನುವಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಆದರೆ ಈ ಹೊಸ ಸರ್ಕಾರವು ಆರು ತಿಂಗಳಿಂದ ಒಂದು ವರ್ಷದ ಅವಧಿಯಲ್ಲಿ ಅಂತ್ಯಕಾಣಲಿದೆ. ಇದು ಇದಕ್ಕಿಂತ ಹೆಚ್ಚು ಕಾಲ ಉಳಿಯುವುದಿಲ್ಲ” ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಮತದಾರರ ನಿರೀಕ್ಷೆಗೆ ತಕ್ಕಂತೆ ಕೆಲಸಗಳನ್ನು ಮಾಡಲು ಹೋಗುತ್ತಿಲ್ಲ ಬದಲಾಗಿ ರಾಜಕೀಯ ಪಕ್ಷಗಳನ್ನು ಒಡೆಯುವ ತಮ್ಮ ಧೋರಣೆಯನ್ನು ಮುಂದುವರಿಸುತ್ತಾರೆ” ಎಂದು ಹೇಳಿದ ಸಿಂಗ್ ಟಿಡಿಪಿ ಮತ್ತು ಜೆಡಿಯುಗೆ ನಾನು ಹೇಳಬಯಸುತ್ತೇನೆ, ನೀವೇ ಸ್ಪೀಕರ್ ಮಾಡಿ, ಇಲ್ಲದಿದ್ದರೆ ನಿಮ್ಮ ಪಕ್ಷದ ಎಷ್ಟು ಸಂಸದರು ಬಿಜೆಪಿ ಸೇರುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: Uttar Pradesh: ಹುಟ್ಟುಹಬ್ಬ ಮುಗಿಸಿ ಬರುವಾಗ ಅಪಘಾತ, ನಾಲ್ವರು ಯೂಟ್ಯೂಬರ್‌ಗಳ ದುರಂತ ಅಂತ್ಯ