Advertisement

ಅವಳಿ ಜಿಲ್ಲೆಯಲ್ಲಿ ಎಎಪಿ ಸಂಘಟನೆಗೆ ಬಲ

04:27 PM Apr 04, 2022 | Team Udayavani |

ಹೊಸಪೇಟೆ: ಅರವಿಂದ ಕೇಜ್ರಿವಾಲ್‌ ಅವರ ದೆಹಲಿ ಹಾಗೂ ಪಂಜಾಬ್‌ ಮಾದರಿ ಆಡಳಿತವನ್ನು ಮೆಚ್ಚಿಕೊಂಡಿರುವ ದೇಶದ ಜನ ರಾಜ್ಯದಲ್ಲಿ ಕೂಡ ಆಮ್‌ ಆದ್ಮಿ ಪಕ್ಷದ ಕಡೆ ಒಲವು ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಲ ಪಡಿಸಲಾಗುವುದು ಎಂದು ಆಮ್‌ ಆದ್ಮಿ ಯುವಘಟಕದ ರಾಜ್ಯಾಧ್ಯಕ್ಷ ಮುಕುಂದಗೌಡ ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ವಿರೋಧ ನಿಲುವು ಹೊಂದಿರುವ ಎಎಪಿ ದೇಶದ ಭವಿಷ್ಯದ ಆಶಾಕಿರಣವಾಗಿದೆ. ಪಕ್ಷದ ಕಾರ್ಯ ಸಿದ್ಧಾಂತಗಳನ್ನು ಮೆಚ್ಚಿಕೊಂಡು ಯುವಜನರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಎರಡು ದಿನಗಳ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಾಗುವುದು.

ಈ ದಿನಗಳಲ್ಲಿ ಆಸಕ್ತರು ನನ್ನನ್ನು ಭೇಟಿಯಾಗಿ ಪಕ್ಷ ಸೇರುವುದು ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಬಹುದು ಎಂದು ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಕಳೆದ ನಗರಸಭೆ ಚುನಾವಣೆಯಲ್ಲಿ ಹೊಸಪೇಟೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಪಕ್ಷ ಖಾತೆ ತೆಗಿದಿದೆ. ಆದರೆ ಪಕ್ಷದಿಂದ ಗೆದ್ದ ಅಭ್ಯರ್ಥಿ ಪಕ್ಷಬಿಟ್ಟು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಅನ್ಯ ಪಕ್ಷಗಳಿಂದ ಪಕ್ಷಕ್ಕೆ ಬರುವ ಅಭ್ಯರ್ಥಿಗಳನ್ನು ಕೂಲಂಕಷವಾಗಿ ವಿಚಾರಿಸಿ ಬರಮಾಡಿಕೊಳ್ಳಲಾಗುವುದು. ಪಕ್ಷಂತರ ಕುರಿತು ಎಚ್ಚರಿಕೆಯ ಹೆಜ್ಜೆ ಇಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ರುಣ್‌ ಶೇಕ್‌ ಹಾಗೂ ಶಬ್ಬೀರ್‌ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next