ನವದೆಹಲಿ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆಮ್ ಆದ್ಮಿ ಪಕ್ಷದ ಸಂಸದ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.
ಮಣಿಪುರ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ತೀವ್ರ ಗದ್ದಲ ಎಬ್ಬಿಸಿದ್ದು ಈ ವೇಳೆ ಸಭಾಧ್ಯಕ್ಷರು ಅಧಿವೇಶನ ಮುಂದುವರೆಸಲು ಯತ್ನಿಸಿದ ವೇಳೆ ಸಂಸದ ಸಂಜಯ್ ಸಿಂಗ್ ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ ಈ ವೇಳೆ ಸಭಾಧ್ಯಕ್ಷರಾದ ಜಗದೀಪ್ ಧನಕರ್ ಅವರು ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ ಆದರೂ ಜಗ್ಗದ ಸಂಸದ ಸದನದ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣ ಸಂಸದ ಸಂಜಯ್ ಸಿಂಗ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿ ಆದೇಶ ಹೊರಡಿಸಿದರು.
ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಪ್ರಧಾನಿ ಅವರೇ ಸದನಕ್ಕೆ ಬಂದು ಉತ್ತರ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸಿದವು. ಸಂಸದರ ಭಾಷಣದ ವೇಳೆ ವಿಪಕ್ಷ ಸಂಸದರು ಧರಣಿ ಆರಂಭಿಸಿದಾಗ ಸಭಾಪತಿ ಸಿಟ್ಟಿಗೆದ್ದರು. ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ಛೀಮಾರಿ ಹಾಕಿದ ಅವರು, ನೀವು ಕುರ್ಚಿಗೆ ಸವಾಲು ಹಾಕುತ್ತಿದ್ದೀರಿ ಎಂದು ಹೇಳಿದರು. ರಾಜ್ಯಸಭೆಯಲ್ಲಿ ಸಂಸದರು ಕೋಲಾಹಲ ಸೃಷ್ಟಿಸಿ, ಫಲಕಗಳನ್ನು ಪ್ರದರ್ಶಿಸಿದರು.
ಮುಂಗಾರು ಅಧಿವೇಶನದ ಮೊದಲ ದಿನದಿಂದಲೂ ಪ್ರತಿಪಕ್ಷಗಳು ಮಣಿಪುರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರಿಂದ ಉತ್ತರವನ್ನು ನೀಡಬೇಕೆಂದು ಸದನದಲ್ಲಿ ಗದ್ದಲ ಎಬ್ಬಿಸಿ ಸದನ ಮುಂದೂಡಲಾಗುತ್ತಿದೆ.
ಇದನ್ನೂ ಓದಿ: Thieves : ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣ 500 ರ ನೋಟು ಇಟ್ಟು ಹೋದ ಕಳ್ಳರು