Advertisement

AAP: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಕೇಜ್ರಿವಾಲ್‌

05:00 PM Sep 17, 2024 | Team Udayavani |

ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್‌ (Arvind Kejriwal) ರಾಜೀನಾಮೆ ನೀಡಿದ್ದಾರೆ. ಮಂಗಳವಾರ (ಸೆ.17) ಸಂಜೆ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೇನಾ ಅವರಿಗೆ ಕೇಜ್ರಿವಾಲ್‌ ಅವರು ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.

Advertisement

ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿರುವ ಅರವಿಂದ ಕೇಜ್ರಿವಾಲ್‌ ಅವರು ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರಬಂದಿದ್ದರು. ಎರಡು ದಿನಗಳ ಹಿಂದೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾನು ರಾಜೀನಾಮೆ ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಅದರಂತೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷದ ಯುವ ನಾಯಕಿ, ಕೇಜ್ರಿವಾಲ್‌ ಸರ್ಕಾರದಲ್ಲಿ ಸಚಿವೆಯಾಗಿದ್ದ ಆತಿಶಿ ಅವರು ದೆಹಲಿಯ ಮುಂದಿನ ಸಿಎಂ ಆಗಲಿದ್ದಾರೆ. ಮಂಗಳವಾರ ಇದರ ಬಗ್ಗೆ ಪಕ್ಷ ತೀರ್ಮಾನಿಸಿದೆ.

ಉತ್ತರಾಧಿಕಾರಿ ಅತಿಶಿ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಜೀನಾಮೆ ಸಲ್ಲಿಕೆ ವೇಳೆ ಕೇಜ್ರಿವಾಲ್‌ ಜತೆಗಿದ್ದರು. ಸಿಸೋಡಿಯಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿದ್ದು, ಇದೀಗ ಜಾಮೀನಿನ ಮೇಲೆ ಹೊರಗಿದ್ದಾರೆ.

Advertisement

ಮಂಗಳವಾರ ಬೆಳಗ್ಗೆ ಆಮ್‌ ಆದ್ಮಿ ಪಕ್ಷವು ಅತಿಶಿ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು. ಫೆಬ್ರವರಿಯಲ್ಲಿ ನಡೆಯಲಿರುವ ಮುಂದಿನ ಅಸೆಂಬ್ಲಿ ಚುನಾವಣೆಯವರೆಗೆ ಅರವಿಂದ ಕೇಜ್ರಿವಾಲ್ ಬದಲಿಗೆ ಆತಿಶಿ ಸಿಎಂ ಆಗಿರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next