Advertisement

AAP ಅನ್ನೇ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯನ್ನಾಗಿ ಮಾಡಲು ಯೋಚನೆ

04:57 PM Oct 16, 2023 | Team Udayavani |

ಹೊಸದಿಲ್ಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷವನ್ನು (AAP) ಆರೋಪಿಯನ್ನಾಗಿ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಸಿಬಿಐ ಮತ್ತು ಇಡಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿವೆ.

Advertisement

ಎರಡು ತನಿಖಾ ಸಂಸ್ಥೆಗಳನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠಕ್ಕೆ ಏಜೆನ್ಸಿಗಳು ಮನಿ ಲಾಂಡರಿಂಗ್ ತಡೆ ಕಾಯಿದೆಯ (PMLA) ಸೆಕ್ಷನ್ 70 ರ ಮೇಲೆ ಕಾನೂನು ನಿಬಂಧನೆಗಳನ್ನು ಅನ್ವಯಿಸಿ ಎಎಪಿಯನ್ನು ಆರೋಪಿಯನ್ನಾಗಿ ಮಾಡಲು ಪರಿಗಣಿಸುತ್ತಿವೆ ಎಂದು ಕೇಳಿಕೊಂಡಿದ್ದಾರೆ.

ಆದಾಗ್ಯೂ, ಆಪ್ ವಿರುದ್ಧ ಪ್ರತ್ಯೇಕ ಆರೋಪವಿದೆಯೇ ಎಂಬುದರ ಕುರಿತು ಮಂಗಳವಾರ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಪೀಠವು ರಾಜು ಅವರನ್ನು ಕೇಳಿದೆ.

ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಂಧಿತರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next