Advertisement

ಉತ್ತರಾಖಂಡದ 70 ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ: ಕೇಜ್ರಿವಾಲ್‌

12:59 AM Aug 21, 2020 | mahesh |

ಹೊಸದಿಲ್ಲಿ: ಉತ್ತರಾಖಂಡ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ರಾಜ್ಯದ 70 ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ. ಈ ಕುರಿತು ಗುರುವಾರ ಪ್ರತಿಕ್ರಿಯಿಸಿರುವ ಅವರು, ಉತ್ತರಾಖಂಡದಲ್ಲಿ ಚುನಾವಣೆ ಎದುರಿಸುವ ಕುರಿತು ಯಾವುದೇ ಸ್ಪಷ್ಟತೆ ಇರಲಿಲ್ಲ. ಈ ಬಗ್ಗೆ ರಾಜ್ಯದಲ್ಲಿ ಸಮೀಕ್ಷೆ ನಡೆಸಿದಾಗ ಶೇ.60ರಷ್ಟು ಮಂದಿ ಈ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಎಎಪಿ ಕಣಕ್ಕಿಳಿಯುವ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯ, ಮೂಲಸೌಲಭ್ಯಗಳು ಚುನಾವಣ ವಿಷಯಗಳಾಗಿವೆ ಎಂದು ಹೇಳಿದ್ದಾರೆ. ಪಂಜಾಬ್‌ ಹಾಗೂ ಗೋವಾ ವಿಧಾನಸಭಾ ಚುನಾವಣೆಯಲ್ಲೂ ಕೂಡ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲು ಚಿಂತನೆ ನಡೆಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next