ನವದೆಹಲಿ: ಪಂಜಾಬ್‌ನ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರಿಗೆ ಸದ್ಯದಲ್ಲೇ ನಡೆಯಲಿರುವ ರಾಜ್ಯಸಭಾ ಸದಸ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಾರ್ಟಿ (ಆಪ್) ಟಿಕೆಟ್ ನೀಡಿದೆ.
ಕ್ರಿಕೆಟ್ ಅಭಿಮಾನಿಗಳಿಂದ ಭಜ್ಜಿ ಎಂದೇ ಕರೆಯಲ್ಪಡುವ ಹರ್ಭಜನ್ ಸಿಂಗ್ ಜೊತೆಗೆ, ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಶೋಕ್ ಮಿತ್ತಲ್, ಆಪ್ ಶಾಸಕ ರಾಘವ್ ಚಡ್ಡಾ, ಐಐಟಿ ದೆಹಲಿಯ ಪ್ರೊಫೆಸರ್ ಸಂದೀಪ್ ಪಾಠಕ್ ಹಾಗೂ ಉದ್ಯಮಿ ಸಂಜೀವ್ ಅರೋರಾ ಅವರಿಗೆ ಟಿಕೆಟ್ ನೀಡಲಾಗಿದೆ.
ಸೋಮವಾರದಂದೇ ಈ ಐವರೂ ನಾಮಪತ್ರ ಸಲ್ಲಿಸಿದ್ದು ಮಾ. 31ರಂದು ಚುನಾವಣೆ ನಡೆಯಲಿದೆ.
ಇದನ್ನೂ ಓದಿ:ಉಕ್ರೇನ್‌ನಿಂದ ಭಾರತಕ್ಕೆ ವಾಪಸು ಮರಳಿದವರ ಬಗ್ಗೆ ಕ್ರಮ: ಭರವಸೆ
ಇತ್ತೀಚೆಗೆ, ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚೆಗೆ 92 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದು ಆಪ್ ಅಧಿಕಾರಕ್ಕೇರಿದೆ. ಹಾಗಾಗಿ ಈ ಐವರೂ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.