Advertisement
ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ನಿವಾಸದೆದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ ಈ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬಂದಿಗಳನ್ನು ನೇಮಿಸಲಾಗಿದೆ ಅಲ್ಲದೆ ಈ ಭಾಗದ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Related Articles
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಟ್ರಾಫಿಕ್ ಪೊಲೀಸರು ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧವನ್ನು ವಿಧಿಸಿದ್ದಾರೆ ಅದರಂತೆ ತುಘಲಕ್ ರಸ್ತೆ, ಸಫ್ದರ್‌ಜಂಗ್ ರಸ್ತೆ ಮತ್ತು ಕೆಮಾಲ್ ಅಟಾತುರ್ಕ್ ಮಾರ್ಗದಲ್ಲಿ ಎಲ್ಲಿಯೂ ವಾಹನಗಳನ್ನು ನಿಲ್ಲಿಸಲು ವಾಹನ ಸಂಚರಿಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.
Advertisement
ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಪಟೇಲ್ ಚೌಕ್ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಗೆ ಸೇರಲಿದ್ದಾರೆ. ಪಟೇಲ್ ಚೌಕ್‌ನಿಂದ ತುಘಲಕ್ ರಸ್ತೆ ಮೂಲಕ ಹೈ ಸೆಕ್ಯುರಿಟಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ ಆದರೆ ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಈ ರೀತಿಯ ಪ್ರತಿಭಟನೆಗೆ ಯಾವುದೇ ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.