Advertisement

Delhi: ಕೇಜ್ರಿವಾಲ್ ಬಂಧನ ವಿರೋಧಿಸಿ ಇಂದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ… ಬಿಗಿ ಭದ್ರತೆ

09:09 AM Mar 26, 2024 | Team Udayavani |

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿಯ ಕುಮ್ಮಕ್ಕಿನಿಂದ ಬಂಧಿಸಲಾಗಿದೆ ಎಂದು ಆಪ್ ಪ್ರತಿಭಟನೆ ನಡೆಸುತ್ತಿದೆ.

Advertisement

ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ನಿವಾಸದೆದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ ಈ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬಂದಿಗಳನ್ನು ನೇಮಿಸಲಾಗಿದೆ ಅಲ್ಲದೆ ಈ ಭಾಗದ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಜೆಪಿಯ ಸರ್ವಾಧಿಕಾರ ದೋರಣೆಯಿಂದ ನಮ್ಮ ನಾಯಕನನ್ನು ಬಂಧಿಸಲಾಗಿದೆ ಎಂದು ಆಪ್ ಕಾರ್ಯಕರ್ತರು ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ನಡೆಸಿ, ಬಿಜೆಪಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ಇಂದು ದೆಹಲಿಯ ಹೈ-ಸೆಕ್ಯುರಿಟಿ ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರವನ್ನು ಆಮ್ ಆದ್ಮಿ ಕಾರ್ಯಕರ್ತರು ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದ್ದು ಈ ಕಾರಣದಿಂದ ಪ್ರಧಾನಿ ನಿವಾಸದ ಬಳಿ ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಅಲ್ಲದೆ ಕಾರ್ಯಕರ್ತರನ್ನು ಅರ್ಧದಲ್ಲೇ ತಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Mobile: ಕೇಜ್ರಿವಾಲ್ ಮೊಬೈಲ್‌ ನಾಪತ್ತೆ? ಹಗರಣಕ್ಕೆ ಸಂಬಂಧಿಸಿದ ಮಾಹಿತಿ ಇರುವ ಸಾಧ್ಯತೆ

ಸಂಚಾರ ಮಾರ್ಗ ಬದಲಾವಣೆ:
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಟ್ರಾಫಿಕ್ ಪೊಲೀಸರು ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧವನ್ನು ವಿಧಿಸಿದ್ದಾರೆ ಅದರಂತೆ ತುಘಲಕ್ ರಸ್ತೆ, ಸಫ್ದರ್‌ಜಂಗ್ ರಸ್ತೆ ಮತ್ತು ಕೆಮಾಲ್ ಅಟಾತುರ್ಕ್ ಮಾರ್ಗದಲ್ಲಿ ಎಲ್ಲಿಯೂ ವಾಹನಗಳನ್ನು ನಿಲ್ಲಿಸಲು ವಾಹನ ಸಂಚರಿಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.

Advertisement

ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಪಟೇಲ್ ಚೌಕ್ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಗೆ ಸೇರಲಿದ್ದಾರೆ. ಪಟೇಲ್ ಚೌಕ್‌ನಿಂದ ತುಘಲಕ್ ರಸ್ತೆ ಮೂಲಕ ಹೈ ಸೆಕ್ಯುರಿಟಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ ಆದರೆ ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಈ ರೀತಿಯ ಪ್ರತಿಭಟನೆಗೆ ಯಾವುದೇ ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next