ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ‘ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಆಪ್ ನಾಯಕ ಗೋಪಾಲ್ ರೈ ಭಾರತ ಮತ್ತು ವಿದೇಶದಲ್ಲಿರುವ ಕೇಜ್ರಿವಾಲ್ ಬೆಂಬಲಿಗರು ದೆಹಲಿಗೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಬಹುದು ಇಲ್ಲವಾದಲ್ಲಿ ತಮ್ಮ ಮನೆಯಲ್ಲೇ ಇದ್ದುಕೊಂಡು ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡಲು ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ಎಲ್ಲಾ ಶಾಸಕರು, ಪದಾಧಿಕಾರಿಗಳು ದೆಹಲಿಯಲ್ಲಿರುವ ಜಂತರ್ ಮಂತರ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸೇರಲಿದ್ದು ಸಾಮೂಹಿಕ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಇತ್ತ ಆಪ್ ನಾಯಕರು ಪ್ರತಿಭಟನೆಗೆ ತಯಾರಿ ನಡೆಸುತಿದ್ದರೆ ಅತ್ತ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆಗಳನ್ನು ಹೆಚ್ಚಿಸಿದ್ದಾರೆ.
ಕೇಜ್ರಿವಾಲ್ ಬಂಧನ ವಿರೋಧಿಸಿ ಕೆಲ ದಿನಗಳ ಹಿಂದೆ ದೆಹಲಿಯ ಪ್ರಧಾನಿ ನಿವಾಸಕ್ಕೆ ‘ಘೇರಾವ್’ ಹಾಕುವ ನಿರ್ಧಾರ ಕಾರ್ಯಕರ್ತರು ನಡೆಸಿದ್ದರು ಆದರೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ: Congress ಪ್ರಣಾಳಿಕೆಯು ಭಾರತಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಬಿಸ್ವಾ