Advertisement

Sushil Rinku: ಆಪ್‌ನ ಏಕೈಕ ಸಂಸದ ಸುಶೀಲ್‌ ರಿಂಕು ಬಿಜೆಪಿ ಸೇರ್ಪಡೆ

08:45 PM Mar 27, 2024 | Team Udayavani |

ನವದೆಹಲಿ: ಪಂಜಾಬ್‌ನಿಂದ ಆಮ್‌ ಆದ್ಮಿ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿರುವ ಏಕೈಕ ಸದಸ್ಯ ಸುಶೀಲ್‌ ಕುಮಾರ್‌ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರ ಜತೆಗೆ ಪಕ್ಷದ ಶಾಸಕ ಶೀತಲ್‌ ಅಂಗುರಲ್‌ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Advertisement

ಆಪ್‌ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ನಡುವೆಯೇ ಆಪ್‌ಗೆ ಮತ್ತಷ್ಟು ಪೆಟ್ಟು ಬಿದ್ದಂತಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್‌ ಪುರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾಬ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

“ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಾಯಕತ್ವಗಳಿಂದ ಪ್ರಭಾವಿತರಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ರಿಂಕು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

Advertisement

Udayavani is now on Telegram. Click here to join our channel and stay updated with the latest news.

Next