Advertisement
ಸಂಜಯ್ ಸಿಂಗ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಅಧ್ಯಕ್ಷರು ನಿರಾಕರಿಸಿದ್ದಾರೆ. ಇದರಿಂದಾಗಿ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಈ ವಿಷಯವು ಪ್ರಸ್ತುತ ವಿಶೇಷಾಧಿಕಾರ ಸಮಿತಿಯಲ್ಲಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ.
ಫೆಬ್ರವರಿ 5 ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್ ಅವರಿಗೆ ಫೆಬ್ರವರಿ 3 ರಂದು ರೂಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿತ್ತು ಈ ನಿಟ್ಟಿನಲ್ಲಿ ಆಪ್ ನಾಯಕನನ್ನು ಬೆಳಗ್ಗೆ 10 ಗಂಟೆಯೊಳಗೆ ಸಂಸತ್ತಿಗೆ ಕರೆದೊಯ್ಯುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿತ್ತು. ಸಂಜಯ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಮತ್ತು ಪ್ರಸ್ತುತ ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ಫೆಬ್ರವರಿ 4 ರಿಂದ 10 ರವರೆಗೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಪ್ ನಾಯಕನ ಅರ್ಜಿಯ ಮೇಲೆ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದ್ದು, ಫೆಬ್ರವರಿ 3 ರೊಳಗೆ ಉತ್ತರವನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಈಗ ನಿಷ್ಕ್ರಿಯಗೊಂಡಿರುವ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಆಪ್ ನಾಯಕ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.
Related Articles
Advertisement