Advertisement

ಅಧಿಕಾರಿ-ಸಿಬ್ಬಂದಿಗೆ ಆರೋಗ್ಯ ಸೇತು ಕಡ್ಡಾಯ: ಜಿಲ್ಲಾಧಿಕಾರಿ ಡಾ|ರಾಜೇಂದ್ರ

06:45 AM Jun 11, 2020 | Suhan S |

ಬಾಗಲಕೋಟೆ: ಆರೋಗ್ಯ ಸೇವೆಗಳನ್ನು ಸಂಪರ್ಕಿಸಿ, ಕೋವಿಡ್‌ ಸೋಂಕಿತರಿಂದ ಅಂತರ ಕಾಯ್ದುಕೊಳ್ಳಲು ಸಹಕಾರಿಯಾಗಿರುವ ಆರೋಗ್ಯ ಸೇತು ಆ್ಯಪ್‌ ಬಳಕೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಡ್ಡಾಯವಾಗಿದೆ ಎಂದು ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಹೇಳಿದರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ನೂತನ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ಸೇತು ಆ್ಯಪ್‌ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕೋವಿಡ್‌-19 ವಿರುದ್ದದ ನಮ್ಮ ಸಂಯೋಜಿತ ಹೋರಾಟದಲ್ಲಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಈ ಆ್ಯಪ್‌ ಸಹಾಯಕಾರಿಯಾಗಿದೆ. ಆದ್ದರಿಂದ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್‌ ಡೌನ್‌ ಲೋಡ್‌ ಮಾಡಿಕೊಳ್ಳತಕ್ಕದ್ದು ಎಂದರು.

ಸೋಂಕಿನ ಅಪಾಯ, ವೈದ್ಯಕೀಯ ಸಲಹೆಗಳು ಮತ್ತು ಸೋಂಕಿತ ವ್ಯಕ್ತಿ ಹತ್ತಿರ ಬಂದರೆ ಎಚ್ಚರಿಕೆಯ ಸೂಚನೆ ನೀಡುತ್ತದೆ. ಇದೊಂದು ಟ್ರ್ಯಾಕಿಂಗ್‌ ವ್ಯವಸ್ಥೆಯಿಂದ ಕೂಡಿದ ಅಪ್ಲಿಕೇಶನ್‌ ಆಗಿದೆ. ಇದನ್ನು ಬಳಸುವುದರಿಂದ ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕ ಬಂದವರನ್ನು ಸುಲಭವಾಗಿ ತಿಳಿಯಬಹುದಾಗಿದೆ. ಅಲ್ಲದೇ ಇಲಾಖೆಯ ಮುಖ್ಯಸ್ಥರು ತಮ್ಮ ಎಲ್ಲ ಸಿಬ್ಬಂದಿಗಳಿಗೆ ತಪ್ಪದೇ ಆ್ಯಪ್‌ ಬಳಸುವಂತೆ ಸೂಚಿಸಬೇಕು. ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವವರು ಜಾಗೃತರಾಗಬೇಕಿದೆ ಎಂದರು.

ಎನ್‌ಐಸಿಯ ಗಿರಿಯಾಚಾರ ಅವರು ಆರೋಗ್ಯ ಸೇತು ಆ್ಯಪ್‌ ಕಾರ್ಯವೈಖರಿ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಶೋಕ ತೋಟದ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next