Advertisement

ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಜುಮ್ಮಾಗೆ ಸನ್ಮಾನ

05:08 PM Jul 13, 2019 | Team Udayavani |

ಔರಾದ: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಸಂಜುಕುಮಾರ ಜುಮ್ಮಾ ಅವರನ್ನು ಪಟ್ಟಣದಲ್ಲಿ ತಾಲೂಕು ಲಿಂಗಾಯತ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Advertisement

ಈ ವೇಳೆ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ವೀರೇಶ ಅಲ್ಮಾಜೆ ಮಾತನಾಡಿ, ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಂಜುಕುಮಾರ ಜುಮ್ಮಾ ಅವರನ್ನು ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದೆ. ಗಡಿ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಸದಸ್ಯರು ಅಕ್ಷರ ಜಾತ್ರೆಯ ಮೂಲಕ ಮಾತೃಭಾಷೆ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಸರ್ಕಾರ ಹಾಗೂ ಸಂಘ ಸಂಸ್ಥೆಯ ಮುಖಂಡರು ಸೇರಿ ಕೆಲಸ ಮಾಡಿದಾಗ ಮಾತ್ರ ನಾಡು ನುಡಿಯ ಅಭಿವೃದ್ಧಿಯಾಗುತ್ತದೆ. ತಾಲೂಕಿನಲ್ಲಿ ನಡೆಯುವ ಪ್ರತಿಯೊಂದು ಸಮ್ಮೇಳನವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ನೆರವೇರಿಸಲಾಗಿದೆ. ಅದರಂತೆ ಸಂತಪೂರ ಹೋಬಳಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೆಳನದ ಯಶಸ್ಸಿಗೆ ಲಿಂಗಾಯತ ಸಮಾಜದ ಸದಸ್ಯರು ಹಾಗೂ ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ದೇವರು ಮಾತನಾಡಿ, ತಾಲೂಕಿನಲ್ಲಿ ಪ್ರತಿಯೊಬ್ಬರೂ ನಾಡು-ನುಡಿ ಅಭಿವೃದ್ಧಿಗೆ ಶ್ರಮಿಸಬೇಕು. ಆಗ ಮಾತ್ರ ಕಾರ್ಯಕ್ರಮಗಳನ್ನು ಮಾಡಿದಕ್ಕೂ ಸಾರ್ಥಕವಾಗುತ್ತವೆ ಎಂದರು. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕನ್ನಡ ಪರ ಸಂಘಟನೆಯ ಸದಸ್ಯರು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಇಂದು ಕನ್ನಡ ಭಾಷೆ ಶ್ರೀಮಂತವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ನವಲಿಂಗ ಪಾಟೀಲ, ಮನೋಹರ ಕಾಡೋದೆ ಹಾಗೂ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next