Advertisement

ಮಾಧುಸ್ವಾಮಿ, ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ

12:53 AM Dec 08, 2019 | Team Udayavani |

ಬೆಂಗಳೂರು: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವೀರಶೈವರ ಮತ ಕೇಳು ವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಕೆ.ಎಸ್‌. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಹಿಳೆಯರಿಗೆ ಅವಮಾನ ಮಾಡಿರುವುದರಿಂದ ಇಬ್ಬರೂ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆಗ್ರಹಿಸಿದ್ದಾರೆ.

Advertisement

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಚಿವರಾಗಿ ಮಾಧುಸ್ವಾಮಿ ಜಾತಿ ಹೆಸರಿನಲ್ಲಿ ಮತ ಕೇಳುವುದು ತಪ್ಪಲ್ಲ ಎನ್ನುತ್ತಾರೆ ಎಂದರೆ, ಅವರು ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಜಾತಿ ಆಧಾರದ ಮೇಲೆ ಮತ ಕೇಳಿದ್ದಕ್ಕೆ ಕಾನೂನಿನ ಪ್ರಕಾರ ಮೂರು ವರ್ಷ ಜೈಲು ಶಿಕ್ಷೆ ಆಗುತ್ತದೆ. ಕಾನೂನು ಸಚಿವರಿಗೆ ಕಾನೂನಿನ ಬಗ್ಗೆ ಜ್ಞಾನವೇ ಇಲ್ಲ ಎಂದು ಟೀಕಿಸಿದರು.

ಕಾನೂನು ಸಚಿವರ ಕಾನೂನು ಉಲ್ಲಂಘನೆಯನ್ನು ರಾಜ್ಯಪಾಲರು ಗಮನಿಸಿಯೂ ಇಲ್ಲ, ಚುನಾವಣಾ ಆಯೋಗ ಜೀವಂತವಾಗಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಮಾಧುಸ್ವಾಮಿ ವಿರುದ್ಧ ಆಯೋಗ ಪ್ರಕರಣ ದಾಖಲಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಮಾಧುಸ್ವಾಮಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ.

ಐಶ್ವರ್ಯ ರೈ ಗೌರವಸ್ಥ ಮನೆತನದ ಹೆಣ್ಣು ಮಗಳು. ಅವರ ಅತ್ತೆ ಸಂಸತ್‌ ಸದಸ್ಯೆ. ಅವರ ಮಾವ ಅಮಿತಾಬ್‌ ಬಚ್ಚನ್‌ ಸಾಂಸ್ಕೃತಿಕ ರಾಯಭಾರಿ. ಇಂತಹ ಗೌರವಯುತ ಕುಟುಂಬದ ಹೆಣ್ಣು ಮಗಳ ಬಗ್ಗೆ ಹಗುರವಾಗಿ ಮಾತನಾಡಿ ರುವುದು ಮಹಿಳಾ ಸಮೂಹಕ್ಕೆ ಮಾಡಿ ರುವ ಅಪಮಾನ. ಈಶ್ವರಪ್ಪ ಜನರ ಕ್ಷಮೆ ಕೋರಬೇಕು. ಬಿಜೆಪಿ ಯವರು ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈರುಳ್ಳಿ ಬೆಲೆ ಹೆಚ್ಚಾಗಿ ರುವ ಕಾರಣ ಲೋಕಾ ಯುಕ್ತರು ಮಾರ್ಕೆಟ್‌ ಯಾರ್ಡ್‌ಗಳ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಬದ್ಧತೆ ಇದ್ದರೆ ಈರುಳ್ಳಿಯನ್ನು ಪಡಿತರ ವ್ಯವಸ್ಥೆಯ ಮೂಲಕ ಹಂಚಿಕೆ ಮಾಡುವ ಕ್ರಮ ಕೈಗೊಳ್ಳಬೇಕು.
-ವಿ.ಎಸ್‌.ಉಗ್ರಪ್ಪ

Advertisement
Advertisement

Udayavani is now on Telegram. Click here to join our channel and stay updated with the latest news.

Next