Advertisement
ಇತ್ತೀಚೆಗೆ ಜರಗಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ,ಉಡುಪಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ಜೆ.ಎಲ್.ಜಿ/ ಎಸ್.ಎಚ್.ಜಿ/ಪಿ.ಬಿ.ಜಿ ಯ ಸದಸ್ಯರಿಗೆ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ 3 ದಿನಗಳ ಕಾಲ ನಡೆಯುತ್ತಿರುವ ಬಟ್ಟೆ ಮತ್ತು ಪೇಪರ್ ಬ್ಯಾಗ್ ತಯಾರಿಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ತಾಲೂಕು ಧ.ಗ್ರಾ.ಯೋಜನಾಧಿಕಾರಿ ರೋಹಿತ್ ಮಾತನಾಡಿ ಯಾವುದೇ ತರಬೇತಿ ಪ್ರಯೋಜನಕ್ಕೆ ಬರುವಂತಿರಬೇಕು.ಇಂದು ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧವಾಗುತ್ತಿರುವ ಹಿನ್ನೆ°ಲೆಯಲ್ಲಿ ಪೇಪರ್ ಹಾಗೂ ಬಟ್ಟೆ ಬ್ಯಾಗ್‌ಗಳ ಬಳಕೆ ಅನಿವಾರ್ಯವಾಗಿದ್ದು ಈ ತರಬೇತಿಯಿಂದ ಸೊÌàದ್ಯೋಗ ಆರಂಭಿಸಿ ಸ್ವಾವಲಂಬಿಯಾಗಿ ಬದುಕಲು ಸಾಧ್ಯ ಎಂದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪೆರ್ಡೂರು ವಲಯ ಒಕ್ಕೂಟದ ಅಧ್ಯಕ್ಷೆ ಮಲ್ಲಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ನಿಸ್ಟ್ ಕಾಲೇಜಿನ ಪ್ರಾಂಶುಪಾಲ ಅಶೋಕ್ ಕೆ, ತರಬೇತುದಾರರಾಗಿ ಕರುಣಾಕರ ಜೈನ್ ಉಪಸ್ಥಿತರಿದ್ದರು. ದ.ಗ್ರಾ.ಯೊ.ಪೆರ್ಡೂರು ವಲಯ ಮೇಲ್ವಿಚಾರಕ ಪ್ರೇಮ ಪ್ರಸಾದ್ ಸ್ವಾಗತಿಸಿ, ಉಪನ್ಯಾಸಕ ಉದಯ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜ್ಯೋತಿ ವಂದಿಸಿದರು. Advertisement
ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಪರಿಸರ ರಕ್ಷಿಸಿ: ಸೇರ್ವೆಗಾರ್
12:12 AM Nov 21, 2019 | Sriram |
Advertisement
Udayavani is now on Telegram. Click here to join our channel and stay updated with the latest news.