ಮಂಗಳೂರು: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ “ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಕುಂದಾಪುರ ಭಂಡಾರ್‌ಕಾರ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹಾಗೂ “ವೀರರಾಣಿ ಅಬ್ಬಕ್ಕ ಪುರಸ್ಕಾರ’ಕ್ಕೆ ಪಾಡªನದ ಮೇರು ಪ್ರತಿಭೆ ಭವಾನಿ ಅವರನ್ನು ಆಯ್ಕೆ ಮಾಡಲಾಗಿದೆ.
ಉತ್ಸವ ಸಮಿತಿಯ ಸ್ವಾಗತಾಧ್ಯಕ್ಷ ಜಯರಾಮ್ ಶೆಟ್ಟಿ ನಗರದ ಪ್ರಸ್‌ಕ್ಲಬ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಫೆ. 4ರಂದು ಉಳ್ಳಾಲ ನಗರಸಭಾ ಅಧೀನದಲ್ಲಿರುವ ಮಹಾತ್ಮಾ ಗಾಂಧಿ ರಂಗಮಂದಿರದಲ್ಲಿ ನಡೆಯುವ ವೀರರಾಣಿ ಅಬ್ಬಕ್ಕ ಉತ್ಸವ 2022-22ರ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಡಾ| ಪಾರ್ವತಿ ಜಿ. ಐತಾಳ್ ಸೃಜನಶೀಲ ಮತ್ತು ಸೃಜನೇತರ ಸಾಹಿತ್ಯ ಕೃತಿಗಳ ರಚನೆಯಲ್ಲಿ ಹೆಸರು ಮಾಡಿದವರು. ಭವಾನಿ ಪ್ರಸಿದ್ಧ ದೈವ ನರ್ತಕರಾದ ದಿ| ಗುರುವಪ್ಪ ಪಂಬದ ಅವರ ಪತ್ನಿ. ದೈವಾರಾಧನೆಯನ್ನು ಸೇವಾ ಕರ್ತವ್ಯದ ನೆಲೆಯಲ್ಲಿ ನಡೆಸಿಕೊಂಡು ಪಾಡªನ ಸಾಹಿತ್ಯವನ್ನು ದೇಶ ವಿದೇಶಗಳಲ್ಲಿ ಪಸರಿಸಿದ್ದಾರೆ ಎಂದು ತಿಳಿಸಿದರು.
ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ, ಉಪಾಧ್ಯಕ್ಷೆ ದೇವಕಿ ಉಳ್ಳಾಲ, ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ ಉಪಸ್ಥಿತರಿದ್ದರು.