Advertisement

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತ ಹಾಕಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಕಿಡ್ನ್ಯಾಪ್

03:46 PM Nov 02, 2021 | Team Udayavani |

ಗುಡಿಬಂಡೆ: ಪಟ್ಟಣ ಪಂಚಾಯಿತಿ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ಮತ ಹಾಕಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರಿಬ್ಬರನ್ನು ಕಿಡ್ನಾಪ್‌ ಮಾಡಿರುವ ಘಟನೆ ಗುಡಿಬಂಡೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಪಟ್ಟಣದ ಒಂದನೇ ವಾರ್ಡಿನ ರಾಜೇಶ್ ಮತ್ತು ಐದನೇ ವಾರ್ಡಿನ ಗಂಗರಾಜು ಕಿಡ್ನಾಪ್ ಆದ ಸದಸ್ಯರಾಗಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ಹಾಕಬೇಕಿದ್ದ ಇಬ್ಬರನ್ನು ಅಪಹರಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 7 ರ ಕಾಮತ್ ಹೋಟೇಲ್ ಬಳಿ ಕಿಡ್ನಾಪ್ ನಡೆದಿರುವುದಾಗಿ ಪಕ್ಷದ ಇತರರು ತಿಳಿಸಿದ್ದು,  ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗುಡಿಬಂಡೆ ಪೊಲೀಸ್ ಠಾಣೆಯ ಮುಂದೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆಯು ನಡೆಯುತ್ತಿದ್ದು, ಸಚಿವ ಸುಧಾಕರ್ ಅವರ ಅಪ್ತರಿಂದ ಕಾಂಗ್ರೆಸ್ ಸದಸ್ಯರ ಕಿಡ್ನಾಪ್ ಮಾಡಲಾಗಿದೆ ಎಂದು ಶಾಸಕರು ಆರೋಪಿಸುತ್ತಿದ್ದಾರೆ.

ಪ್ರತಿಭಟನಾಕಾರರು ಕೂಡಲೇ ಕಾಂಗ್ರೆಸ್ ಸದಸ್ಯರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದು, ಗುಡಿಬಂಡೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next