Advertisement

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಗೊಂಡು ಎಎಸ್ಐ ಸಾವು

04:34 PM Jan 26, 2022 | Team Udayavani |

ಕಾರವಾರ : ಗಣರಾಜ್ಯೋತ್ಸವದ ದಿನ ಕರ್ತವ್ಯದಲ್ಲಿದ್ದಾಗಲೇ ಕಾರವಾರದ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಅಬ್ದುಲ್ ಖಾದರ್ ಮಹ್ಮದ್ ಶೇಖ್ ಮೃತಪಟ್ಟ ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ .

Advertisement

1964 ರಂದು ಕಾರವಾರದಲ್ಲಿ ಜನಿಸಿದ ಅವರು, 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರ್ಪಡೆಯಾಗಿದ್ದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ , ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

2019 ರಲ್ಲಿ ಎಎಸ್ಐ ಆಗಿ ಪದೊನ್ನತಿ ಹೊಂದಿ ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಗಣರಾಜ್ಯೋತ್ಸವ ಆಚರಣೆ ವೇಳೆ ಬೆಳಗ್ಗೆ 8.30 ಕ್ಕೆ ಕರ್ತವ್ಯದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

ಲೋ ಬಿಪಿ ಹಾಗೂ ಶುಗರ್ ಕಾರಣದಿಂದ ಹೃದಯಾಘಾತವಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ : ಸಿದ್ದು-ಡಿಕೆಶಿ ತಿಕ್ಕಾಟದಿಂದ ಹಲವರು ಕಾಂಗ್ರೆಸ್ ಬಿಡುತ್ತಾರೆ,ಯಾರೂ ಸೇರಲ್ಲ: ಸಿಎಂ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next