ಹೈದರಾಬಾದ್: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದವರಾದ ಅಬ್ದುಲ್ ನಜೀರ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
Advertisement
ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನ್ಯಾ.ನಜೀರ್ ಅವರಿಗೆ ರಾಜ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.
ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಹಾಗೂ ಅವರ ಪತ್ನಿ ವೈ.ಎಸ್ ಭಾರತಿ, ಹೈಕೋಟ್ ಜಡ್ಜ್ಗಳು, ರಾಜ್ಯ ಸಚಿವರು, ಶಾಸಕರು ಹಾಗೂ ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು. ಮಾಜಿ ರಾಜ್ಯಪಾಲರಾದ ಬಿಸ್ವಾ ಭೂಷಣ್ ಅವರ ಸ್ಥಾನಕ್ಕೆ ನ್ಯಾ.ನಜೀರ್ ನೇಮಕಗೊಂಡಿದ್ದಾರೆ.