Advertisement

ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಹಸಿದ ಹೊಟ್ಟೆಗಳಿಗೆ ಸಹಾಯ ಮಾಡಿದ ಕೂಲಿ ಕಾರ್ಮಿಕ

05:42 PM Apr 27, 2020 | keerthan |

ಮಂಗಳೂರು: ಹಜ್ ಯಾತ್ರೆಗೆಂದು ಕಷ್ಟಪಟ್ಟು ಕೂಡಿಟ್ಟಿದ್ದ ಹಣದಿಂದ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಿರುವ ವ್ಯಕ್ತಿಯೋರ್ವರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೂಡಿನಬಳಿಯ ನಿವಾಸಿ ಅಬ್ದುಲ್ ರಹ್ಮಾನ್ ಎನ್ನುವವರು ತಾನು ಪವಿತ್ರ ಯಾತ್ರೆಗೆ ಕೂಡಿಟ್ಟ ಹಣದಿಂದ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದ್ದಾರೆ.

Advertisement

ಅಬ್ದುಲ್ ರಹ್ಮಾನ್ ಅವರು ಸುಮಾರು 20 ವರ್ಷಗಳಿಂದ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ. ಕೂಲಿ ಮಾಡಿ ಸಂಪಾದಿಸಿದ ಹಣದಿಂದ ಪವಿತ್ರ ಮಕ್ಕಾ, ಮದೀನ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಒಂದಿಷ್ಟು ಹಣವನ್ನು ಹಲವಾರು ವರ್ಷಗಳಿಂದ ಕೂಡಿಡುತ್ತಾ ಬಂದಿದ್ದಾರೆ.

ಆದರೆ ಈಗ ಕೋವಿಡ್ ವೈರಸ್ ಕಾರಣದಿಂದ ಜನರು ಕಷ್ಟ ಪಡುತ್ತಿದ್ದಾರೆ. ಇದನ್ನು ಕಂಡ ಅಬ್ದುಲ್ ರಹ್ಮಾನ್ ತಾನು ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಅಕ್ಕಿ ಸಹಿತ ಆಹಾರ ಸಾಮಗ್ರಿಗಳನ್ನು ಖರೀದಿಸಿ ಸಂಕಷ್ಟದಲ್ಲಿರುವವರಿಗೆ ವಿತರಿಸಿದ್ದಾರೆ.

ಲಾಕ್ ಡೌನ್ ನಿಂದ ಜನಸಾಮಾನ್ಯರು ಕಷ್ಟದಲ್ಲಿರುವ ಈ ಸಂದರ್ಭದಲ್ಲಿ ನಾನು ಹಜ್ ಯಾತ್ರೆಗೆಂದು ಕೂಡಿಟ್ಟ ಹಣವು ನಮಗೆ ಶಾಪ ಹಾಕದೇ ಇರಲಾರದು. ಈ ಹಣದಿಂದ ಹಜ್ ಯಾತ್ರೆ ಮಾಡುವುದಕ್ಕಿಂತ ಹಸಿವಿನಿಂದಿರುವವರ ಹೊಟ್ಟೆ ತುಂಬಿಸುವುದೇ ಪುಣ್ಯದ ಕೆಲಸ ಎನ್ನುತ್ತಾರೆ ಅಬ್ದುಲ್ ರಹ್ಮಾನ್.

ಪವಿತ್ರ ಯಾತ್ರೆಗೆ ಕೂಡಿಟ್ಟ ಅಲ್ವ ಸ್ವಲ್ಪ ಹಣದಿಂದ ಅಹಾರ ಸಾಮಾಗ್ರಿಗಳನ್ನು ಖರೀದಿಸಿ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾದ ಕುಟುಂಬಕ್ಕೆ ಸಹಾಯಹಸ್ತ ನೀಡುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next