Advertisement

Gadag; ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ

07:07 PM Oct 03, 2023 | Team Udayavani |

ಗದಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿನವ ಹಾಲಶ್ರೀ ಅವರನ್ನು ಜಿಲ್ಲೆಯ ಮುಂಡರಗಿ ಪೊಲೀಸರು ಪಟ್ಟಣದಲ್ಲಿ ಮಂಗಳವಾರ ವಿಚಾರಣೆ ನಡೆಸಿದರು.

Advertisement

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅಭಿನವ ಹಾಲಶ್ರೀ ಅವರನ್ನು ಮುಂಡರಗಿ ಪಟ್ಟಣಕ್ಕೆ ಕರೆತಂದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಲಯದಿಂದ ಅನುಮತಿ ಪಡೆದು ಎರಡು ದಿನಗಳ ಪೊಲೀಸ್ ಕಸ್ಟಡಿ ತೆಗೆದುಕೊಂಡರು.

ಕೋರ್ಟ್ ನಿಂದ ಹಾಲಶ್ರೀ ಅವರನ್ನು ತಾಲೂಕಾ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗಾಗಿ ಕರೆದುಕೊಂಡು ಹೋಗಿ ತಪಾಸಣೆ ನಡೆಸಲಾಯಿತು.

ಇದನ್ನೂ ಓದಿ:Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ

ಹಾಲಶ್ರೀ ಅವರ ಆರೋಗ್ಯವು ಸ್ಥೀರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಪೊಲೀಸರು ಎರಡು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ.

Advertisement

ಜಿಲ್ಲೆಯ ಮುಂಡರಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಿರೇಹಡಗಲಿಯ ಅಭಿನವ ಹಾಲಶ್ರೀ ವಿರುದ್ದ ಎಂಎಲ್ಎ ಟಿಕೆಟ್ ಕೊಡಿಸುವ ಭರವಸೆ ನೀಡಿ ಒಂದು ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸಂಜಯ ಚವಡಾಳ ಅವರು ಸೆ. 19ರಂದು ಅಭಿನವ ಹಾಲಶ್ರೀ ವಿರುದ್ಧ ದೂರು ದಾಖಲಿಸಿದ್ದರು. ಸೆ. 22 ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next