Advertisement

ಶೂಟಿಂಗ್ ವೇಳೆ ಗಾಯ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು

01:56 PM Aug 23, 2021 | Team Udayavani |

ಮುಂಬೈ : ಶೂಟಿಂಗ್ ವೇಳೆ ಗಾಯಗೊಂಡಿರುವ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ತಮಿಳಿನ ‘ಓಟು ಸೇರಪ್ಪು ಸೈಜ್ 7’ ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಸಿನಿಮಾದಲ್ಲಿ ಅಭಿಷೇಕ್ ಬಚ್ಚನ್ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಈ ನಟ ಕೈಗೆ ಗಾಯವಾಗಿದ್ದು, ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಹೊರಗೆ ಅಮಿತಾಬ್ ಬಚ್ಚನ್ ಸೇರಿದಂತೆ ಅವರ ಕುಟುಂಬದವರು ನಿಂತಿರುವ ಫೋಟೊ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಅಭಿಷೇಕ್ ಬಚ್ಚನ್ ಅವರಿಗೆ ನಿಜಕ್ಕೂ ಏನಾಗಿದೆ ಎಂಬುದರ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲವಾದರೂ ಅವರ ಕೈಗೆ ಪೆಟ್ಟಾಗಿದೆ ಎಂದು ಹೇಳಲಾಗಿದೆ.

ಅಭಿಷೇಕ್ ಬಚ್ಚನ್ ಅವರ ಪತ್ನಿ ನಟಿ ಐಶ್ವರ್ಯ ರೈ ಅವರು ಸಿನಿಮಾ ಶೂಟಿಂಗ್ ನಿಮಿತ್ತ ಮಧ್ಯ ಪ್ರದೇಶದಲ್ಲಿದ್ದಾರೆ. ಪತಿಗೆ ಗಾಯವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಖಾಸಗಿ ಜೆಟ್ ಮೂಲಕ ಮುಂಬೈಗೆ ತೆರಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

Advertisement

ಇನ್ನು ಇತ್ತೀಚಿಗಷ್ಟೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೂ ಶೂಟಿಂಗ್ ನಲ್ಲಿ ಪೆಟ್ಟಾಗಿತ್ತು. ಅವರು ಹೈದ್ರಾಬಾದ್ ಗೆ ತೆರಳಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇತ್ತ ಕನ್ನಡ ಸಿನಿಮಾ ಲವ್ ಯೂ ರಚ್ಚು ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಫೈಟರ್ ಸಾವನ್ನಪ್ಪಿರುವ ಘಟನೆ ಇಲ್ಲಿ ಸ್ಮರಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next