ನವದೆಹಲಿ: ಕಲ್ಲಿದ್ದಲು ಕಳಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಆಗಿರುವ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ, ಮಂಗಳವಾರ(ಫೆ.23, 2021)ಆಕೆಯ ಮನೆಯಲ್ಲಿಯೇ ವಿಚಾರಣೆ ನಡೆಸುವುದಾಗಿ ಸಿಬಿಐ ತಿಳಿಸಿದೆ.
ಇದನ್ನೂ ಓದಿ: ಭೀಮಾ ಕೊರೆಗಾಂವ್ ಪ್ರಕರಣ : ವರವರ ರಾವ್ ಗೆ ಬಾಂಬೆ ಹೈಕೋರ್ಟ್ ಜಾಮೀನು..!
ಕಲ್ಲಿದ್ದಲು ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿಚಾರಣೆಯನ್ನು ಮನೆಯಲ್ಲಿಯೇ ನಡೆಸಬೇಕೆಂದು ಅಭಿಷೇಕ್ ಪತ್ನಿ ರುಜಿರಾ ಬ್ಯಾನರ್ಜಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿರುವುದಾಗಿ ಸಿಬಿಐ ತಿಳಿಸಿದೆ.
ಸಿಬಿಐ ಅಧಿಕಾರಿಗಳ ತಂಡ ಭಾನುವಾರ(ಫೆ.21) ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ಸಮನ್ಸ್ ಜಾರಿಗೊಳಿಸಲು ತೆರಳಿದ್ದರು. ಆದರೆ ಈ ಸಂದರ್ಭದಲ್ಲಿ ರುಜಿರಾ ಬ್ಯಾನರ್ಜಿ ಮನೆಯಲ್ಲಿ ಇರಲಿಲ್ಲವಾಗಿತ್ತು ಎಂದು ವರದಿ ಹೇಳಿದೆ.
ಈ ಸಂದರ್ಭದಲ್ಲಿ ರುಜಿರಾ ಬ್ಯಾನರ್ಜಿ ಜತೆ ಮೊಬೈಲ್ ಸಂಭಾಷಣೆ ನಡೆಸಿದ್ದರು. ಭಾನುವಾರವೇ ವಿಚಾರಣೆ ನಡೆಸುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದರು. ಆದರೆ ತನಗೆ ಒಂದು ದಿನ ಕಾಲಾವಕಾಶ ನೀಡಬೇಕೆಂದು ರುಜಿರಾ ಬ್ಯಾನರ್ಜಿ ಮನವಿ ಮಾಡಿಮೊಂಡಿದ್ದು, ಈ ಹಿನ್ನಲೆಯಲ್ಲಿ ಸೋಮವಾರ ಸಮನ್ಸ್ ಗೆ ಉತ್ತರ ನೀಡಿರುವ ರುಜಿರಾ, ಮಂಗಳವಾರ 11ಗಂಟೆಯಿಂದ 3ಗಂಟೆ ನಡುವೆ ನಿವಾಸದಲ್ಲಿ ವಿಚಾರಣೆ ನಡೆಸುವಂತೆ ತಿಳಿಸಿದ್ದು, ಇದಕ್ಕೆ ಸಿಬಿಐ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.