ಬಂಟ್ವಾಳ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರೆಸಾವಿಯಲ್ಲಿ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಮಾಣಿ ನಿವಾಸಿ ಚಂದಪ್ಪ ಮೂಲ್ಯ ಅವರ ಮೊಮ್ಮಗ, ಉಗ್ಗಪ್ಪ ಮೂಲ್ಯ ಅವರ ಮಗ ಅಭಿಷೇಕ್ (27) ಮೃತಪಟ್ಟಿದ್ದಾನೆ.
ನಿನ್ನೆ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ವೇಳೆ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ.
ಅಭಿಷೇಕ್ ಗೆ ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಸಿಕ್ಕಿದ್ದು ಅತ ಇಂದು ಕೆಲಸಕ್ಕೆ ಸೇರಲಿದ್ದ. ಆದರೆ ಕೆಲಸದ ಉತ್ಸಾಹದಲ್ಲಿ ಮನೆ ಬಿಟ್ಟಿದ್ದ ಅಭಿಷೇಕ್ ಮರಳಿ ಬಾರದ ಲೋಕಕ್ಕೆ ಹೋಗಿದ್ಧಾನೆ.
ಇತ್ತೀಚೆಗೆ ಅಭಿಷೇಕ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ನಿನ್ನೆ ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರ ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದ. ತಮ್ಮನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.