Advertisement

Bangalore: ಶ್ವಾನದ ಜತೆ ಅಸಹಜ ಲೈಂಗಿಕ ಕ್ರಿಯೆ; ಸೆರೆ

12:10 PM Sep 25, 2023 | Team Udayavani |

ಬೆಂಗಳೂರು: ಶ್ವಾನದ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

Advertisement

ಮಂಡ್ಯ ಮೂಲದ ಮರಿಗೌಡ(32) ಬಂಧಿತ.

ಆರೋಪಿ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ತೇಜೇಶ್ವರ ಎಂಬವರು ದೂರು ನೀಡಿದ್ದರು. ಈ ಹಿಂದೆ ನಗರದಲ್ಲಿ ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡುತ್ತಿದ್ದ ಮರಿಗೌಡ, ಕೌಟುಂಬಿಕ ವಿಚಾರವಾಗಿ ಕುಟುಂಬ ಸದಸ್ಯರಿಂದ ದೂರವಾಗಿದ್ದಾನೆ. ಎಲ್ಲೆಂದರಲ್ಲಿ ಮಲಗುವುದು, ಸಣ್ಣ-ಪುಟ್ಟ ಕೆಲಸ ಮಾಡುತ್ತಿದ್ದ, ಈ ಮಧ್ಯೆ ಕೆಲ ದಿನಗಳ ಹಿಂದೆ ಬೀದಿ ನಾಯಿ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದರು. ಈ ಸಂಬಂಧ ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next