Advertisement

ಬಿಜೆಪಿಯ 30 ಶಾಸಕರು ಕೈ ಸಂಪರ್ಕದಲ್ಲಿದ್ದಾರೆ

07:05 AM Jun 25, 2019 | Team Udayavani |

ಚಿತ್ರದುರ್ಗ: “ಬಿಜೆಪಿಯ 30 ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ’ ಎನ್ನುವ ಮೂಲಕ ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೊಸ ಬಾಂಬ್‌ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಹೀಗಾಗಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ’ ಎಂದರು.

Advertisement

ಬಿಜೆಪಿಯವರು ಎಷ್ಟೇ ಪ್ರಯತ್ನ ಪಟ್ಟರೂ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನ 20 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂಬುದೆಲ್ಲ ಸುಳ್ಳು. ಮಧ್ಯಂತರ ಚುನಾವಣೆ ಬರುತ್ತದೆ ಎಂದು ಯಡಿಯೂರಪ್ಪ ಹಗಲುಗನಸು ಕಾಣುತ್ತಿದ್ದಾರೆ. ಅದು ನನಸಾಗುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರೂ ಅತೃಪ್ತರಿಲ್ಲ. ಬದಲಾಗಿ ಬಿಜೆಪಿಯ 30 ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next