Advertisement

ಕೋವಿಡ್ 2ನೇ ಅಲೆಯ ಬಗ್ಗೆ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಬಸವರಾಜ ಬೊಮ್ಮಾಯಿ

07:25 PM Feb 21, 2021 | Team Udayavani |

ಕಾಪು: ಕೋವಿಡ್ ಎರಡನೇ ಅಲೆಯಿಂದ ಉಂಟಾಗುವ ತೊಂದರೆಗಳಿಂದ ರಾಜ್ಯದ ಜನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಜನರ ಬಗ್ಗೆ ವಿಶೇಷ ಗಮನ ಹರಿಸಲಾಗುವುದು. ಗಡಿ ಭಾಗಗಳಲ್ಲಿ ಕೆಲವೊಂದು ನಿರ್ಬಂಧಗಳನ್ನು ಹಾಕುವುದರ ಬಗ್ಗೆ ಸರಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಫೆ. 20ರಂದು ಕಾಪು ಪೊಲೀಸ್ ಠಾಣೆಯ ಸನಿಹದಲ್ಲಿ ಸುಮಾರು 3.57 ಕೋ. ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಪೊಲೀಸ್ ವಸತಿ ಗೃಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇರಳ ಮತ್ತು ಮಹಾರಾಷ್ಟ್ರದ ಜೊತೆಗೆ ಕೇವಲ ಪ್ರವಾಸಿ ಮಾತ್ರವಲ್ಲದೇ ವ್ಯಾಪಾರ ವಹಿವಾಟಿಗೂ ಸಂಬಂಧಿಸಿದ ಸಂಬಂಧಗಳಿವೆ. ಕೇರಳದಿಂದ ರಾಜ್ಯಕ್ಕೆ ಬರುವ 15-16 ರಸ್ತೆಗಳ ಪೈಕಿ ಕೆಲವೊಂದರಲ್ಲಿ ಸಂಚಾರ ನಿರ್ಬಂಧಿಸಿ ಪ್ರಮುಖ ರಸ್ತೆಗಳನ್ನು ಮಾತ್ರಾ ಸಂಪರ್ಕಕ್ಕೆ ಸೀಮಿತಗೊಳಿಸಲಾಗುವುದು. ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದ್ದು, ಟೆಸ್ಟ್ ನಡೆಸಿರುವ ಬಗ್ಗೆ ಸರ್ಟಿಫಿಕೇಟ್ ತೋರಿಸಿದರೆ ಮಾತ್ರಾ ರಾಜ್ಯದ ಗಡಿ ಪ್ರದೇಶಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಡಲು ಸೂಚನೆ ನೀಡಲಾಗುವುದು ಎಂದರು.

ಇದನ್ನೂ ಓದಿ: ‘ಪೊಗರು’ ಚಿತ್ರದಲ್ಲಿ ಅರ್ಚಕ-ಪುರೋಹಿತರ ಅವಹೇಳನಕಾರಿ ಚಿತ್ರಣ: ಸಚ್ಚಿದಾನಂದ ಮೂರ್ತಿ ಖಂಡನೆ

ಪಿಎಫ್‌ಐ ವಿರುದ್ಧ ಕಠಿಣ ಕ್ರಮ: ಪಿಎಫ್‌ಐ ವಿಚಾರದಲ್ಲಿ ರಾಜ್ಯ ಸರಕಾರ ತನ್ನ ನಿರ್ಧಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಪಿಎಫ್‌ಐ ವಿರುದ್ಧ ಗಂಭೀರವಾದ ಕ್ರಮ ಜಾರಿಯಾಗಲಿದೆ. ಈ ಬಗ್ಗೆ ವಿಚಾರಣೆ, ತನಿಖೆ ನಡೆಯುತ್ತಿದೆ. ತಪ್ಪಿತಸ್ತರಿಗೆ ಖಂಡಿತವಾಗಿಯೂ ಶಿಕ್ಷೆಯಾಗಲಿದೆ ಎಂದರು.

Advertisement

ಮೀಸಲಾತಿ ವಿಚಾರದಲ್ಲಿ ಕಾನೂನು ತಜ್ಞರ ಜೊತೆಗೆ ಮಾತುಕತೆ: ಮೀಸಲಾತಿ ವಿಚಾರದಲ್ಲಿ ರಾಜ್ಯದಲ್ಲಿ ಹಲವಾರು ಬೇಡಿಕೆಗಳು ಕೇಳಿ ಬರುತ್ತಿವೆ. ಬಹಳಷ್ಟು ಮಹತ್ವದ ಬೆಳವಣಿಗೆಗಳು ಕೂಡಾ ನಡೆಯುತ್ತಿವೆ. ಮೀಸಲಾತಿಗಾಗಿ ಪಾದಯಾತ್ರೆ, ಮೆರವಣಿಗೆ ನಡೆಸುತ್ತಿರುವವರ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಎಸ್ಸಿ, ಎಸ್ಟಿ, ಒಬಿಸಿ, ಜನರಲ್ ಎಲ್ಲಾ ವರ್ಗಗಳ ಜನರಿಂದಲೂ ವಿವಿಧ ಬೇಡಿಕೆಗಳಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ಕಾನೂನು ತಜ್ಞರ ಜೊತೆಗೂ ಮಾತುಕತೆ ನಡೆಸಿ, ಮುಂದುವರಿಯಲಾಗುವುದು ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಕಾಪು ಪುರಸಭೆಯ ಅಧ್ಯಕ್ಷ ಅನಿಲ್ ಕುಮಾರ್, ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಜಿಲ್ಲಾ‍ಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:  ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!

Advertisement

Udayavani is now on Telegram. Click here to join our channel and stay updated with the latest news.

Next