Advertisement

ಸಚಿವ ಸಂಪುಟ ರಚನೆಯಾಗದಿರುವುದು ಪರಿಹಾರ ಕಾರ್ಯಗಳಿಗೆ ತೊಡಕು

12:32 PM Aug 15, 2019 | Hari Prasad |

ಮೈಸೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ರಾಜ್ಯದಲ್ಲಿ ಸಚಿವ ಸಂಪುಟ ಅಗತ್ಯವಾಗಿ ಇರಬೇಕಿತ್ತು ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಈ ಮೂಲಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಷ್ಟು ದಿನವಾದರೂ ಸಚಿವ ಸಂಪುಟ ರಚನೆ ಮಾಡದಿರುವ ಪಕ್ಷದ ನಾಯಕರ ನಡೆಯ ಕುರಿತು ಹಿರಿಯ ಸಂಸದ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Advertisement

ಪ್ರವಾಹ ಉಂಟಾಗಿರುವ ಸ್ಥಳಗಳಿಗೆ ಮುಖ್ಯಮಂತ್ರಿ ಖುದ್ದು ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಸಚಿವ ಸಂಪುಟ ರಚನೆಯಾಗಬೇಕೆನ್ನುವಷ್ಟರಲ್ಲಿ ರಾಜ್ಯದಲ್ಲಿ ಪ್ರವಾಹ ಕಾಣಿಸಿಕೊಂಡಿದ್ದು ಒಂದು ಆಕಸ್ಮಿಕ. ಆದರೆ ಇಂತಹ ಸಂಕಟದ ಸಮಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದಿದ್ದರೆ ಪ್ರವಾಹ ಸಂಕಷ್ಟವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಇನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸುಲಭವಾಗುತ್ತಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಶ್ರೀನಿವಾಸ ಪ್ರಸಾದ್ ಅವರು ಸಮಜಾಯಿಷಿ ನೀಡಿದರು.

ನಾನು ಕೂಡ ಈ ಹಿಂದೆ ಕಂದಾಯ ಸಚಿವನಾಗಿ ಕೆಲಸ ಮಾಡಿದ್ದು ಪರಿಸ್ಥಿಯ ಗಂಭೀರತೆ ನನಗೆ ಅರ್ಥವಾಗುತ್ತದೆ. ಅದರೂ ಕೂಡ ಎಲ್ಲಾ ಶಾಸಕರೂ ರಾಜ್ಯದಾದ್ಯಂತ ಪ್ರವಾಸ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next