Advertisement

BJP ವಿಜಯೇಂದ್ರ ಪದಗ್ರಹಣಕ್ಕೆ ಗೈರು: ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ

08:03 PM Nov 15, 2023 | Team Udayavani |

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು,’ಕುಂಬಳಗೂಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಪ್ಲ್ಯಾನ್ ಆಗಿತ್ತು.ಹೀಗಾಗಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

Advertisement

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ”ಮೊದಲು ನ.16 ರಂದು ಪೊಲೀಸ್ ಠಾಣೆ ಉದ್ಘಾಟನೆ ಎಂದಿದ್ದರು. ಬಳಿಕ ನ.15 ಕ್ಕೆ ಕಾರ್ಯಕ್ರಮ ಎಂದು ಗೃಹಸಚಿವರು ತಿಳಿಸಿದರು. ಹೀಗಾಗಿ ವಿಜೇಯೆಂದ್ರ ಅವರ ಕಾರ್ಯಕ್ರಮಕ್ಕೆ ಹೋಗಿಲ್ಲ. ನಮ್ಮ ಕ್ಷೇತ್ರಕ್ಕೆ ಇಂದು ಗೃಹ ಸಚಿವರು ಬರುತ್ತಿದ್ದಾರೆ, ಹೀಗಾಗಿ ಇಲ್ಲಿದ್ದೇನೆ.ಸಚಿವರ ಕಾರ್ಯಕ್ರಮ ಮುಗಿದ ಬಳಿಕ ನಾನು ಪಕ್ಷದ ಕಾರ್ಯಕ್ರಮಕ್ಕೆ ಹೋಗುತ್ತೆನೆ.ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ. ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೆನೆ” ಎಂದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜೇಯೆಂದ್ರ ಅಯ್ಕೆ ಸರಿಯಾಗಿದೆ‌.ಇಂದಿನ ಪರಿಸ್ಥಿತಿಗೆ ಅವರ ಆಯ್ಕೆ ನೂರಕ್ಕೆ ನೂರರಷ್ಟು ಸರಿ ಇದೆ.ಈ ಹಿಂದೆ ವಿಜೆಯೆಂದ್ರ ಅವರು ರಾಜ್ಯ ಉಪಾಧ್ಯಕ್ಷರಾಗಿದ್ದರು.ಅವರಿಗೆ ಅನುಭವ ಇದೆ.ಎಲ್ಲ ಜಿಲ್ಲೆಯ ನಾಯಕರ ಅವರಿಗೆ ಪರಿಚಯ ಇದೆ.ಹೀಗಾಗಿ ಮುಂದಿನ ಚುನಾವಣೆಗೆ ಒಳ್ಳೆಯ ಬೆಳವಣಿಗೆ ಎಂದರು.

”ಇದು ಕುಟುಂಬ ರಾಜಕೀಯ ಅಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲಲ್ಲ ಎಂದ ಮೇಲೆ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ.ಬಿ.ವೈ.ರಾಘವೇಂದ್ರ ಹಿಂದೆ ಲೋಕಸಭಾ ಸದಸ್ಯರಾಗಿದ್ದರು. ಈಗ ವಿಜಯೇಂದ್ರ ಎಂಎಲ್ ಎ ಆಗಿದ್ದಾರೆ ಅಷ್ಟೇ” ಎಂದರು.

ಬಿಜೆಪಿಯಲ್ಲಿ ಕಡೆಗಣನೆ ಎಂಬ ಪ್ರಶ್ನೆಗೆ ಉತ್ತರಿಸಿ, ”ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ ಬಿಡಲಿ. ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ.ಗ್ಯಾರಂಟಿ ಯೋಜನೆಗಳ ಬಗ್ಗೆ‌ 40 ಮಂದಿ ಮಹಿಳೆಯರ ಮೂಲಕ ಗ್ಯಾರೆಂಟಿ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ‌.ಇದು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ.‌ಸರಕಾರಿ ಯೋಜನೆಗಳು ಜನರಿಗೆ ತಲುಪಬೇಕು ಎಂಬ ದೃಷ್ಟಿಯಷ್ಟೆ ನನ್ನದು. ಹಿಂದೆ ಮೈಸೂರು ಉಸ್ತುವಾರಿ ಸಚಿವನಾಗಿದ್ದ ವೇಳೆ ಕೇವಲ ಮೂರು ಕ್ಷೇತ್ರದಲ್ಲಷ್ಟೆ ಬಿಜೆಪಿ ಇತ್ತು.ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿಯು ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಂತ ಕಾಂಗ್ರೆಸ್ ಸರಕಾರದ ಕಾರ್ಯಕ್ರಮ ಮಾಡಬಾರದಾ?” ಎಂದು ಬಿಜೆಪಿ ನಾಯಕರಿಗೆ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದರು.

Advertisement

”ಎಸ್.ಎಂ.ಕೃಷ್ಣ ಅವರು ಬಿಜೆಪಿ ಸೇರಿದ್ದರು. ಅವರಿಗೆ ನೀಡಿದ್ದ ಅಶ್ವಾಸನೆಗಳನ್ನು ಬಿಜೆಪಿ ಈಡೇರಿಸಿಲ್ಲ.ಹಿಂದೆ ಸಚಿವರಾಗಿದ್ದ ಶಂಕರ್, ಬಿ.ಸಿ.ನಾಗೇಶ್ ಸೇರಿದಂತೆ ಅನೇಕರಿಗೆ ಯಾವ ಸೌಲಭ್ಯ ನೀಡಿಲ್ಲ.ಮೊದಲು ಜಾಮೂನು ನೀಡಿ ಬಳಿಕ ವಿಷ ನೀಡುತ್ತಾರೆ ಎಂಬ ಹೇಳಿಕೆ ನನ್ನೊಂದಿಗೆ ಬಿಜೆಪಿ ಸೇರಿದ್ದ 17 ಮಂದಿಗೆ ಸೇರಿಸಿ ಹೇಳಿದ್ದು ಹೊರತು ವೈಯಕ್ತಿಕವಾಗಿರಲಿಲ್ಲ. ನನಗೆ ಮಂತ್ರಿ ಸ್ಥಾನ ನೀಡಿದರು, ಆದರೆ ಏಳೆಂಟು ಜನರಿಗೆ ಸ್ಥಾನಮಾನ ಸಿಗಲಿಲ್ಲ” ಎಂದರು.

ಎಂಎಲ್ ಸಿ. ಎಚ್.ವಿಶ್ವನಾಥ್ ಅವರು ತಮ್ಮ ಪುಸ್ತಕದಲ್ಲಿ ಸಮ್ಮಿಶ್ರ ಸರಕಾರ ಉರುಳುವಾಗ ಕೆಲ ಶಾಸಕರು ಹಣ ಪಡೆದ ಬಗ್ಗೆ ಉಲ್ಲೆಖ ಮಾಡುವುದಾಗಿ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ”ಬುಕ್ ನಲ್ಲಿ ಯಾಕೆ? ಧರ್ಮಸ್ಥಳ, ಚಾಮುಂಡಿ ಬೆಟ್ಟದಲ್ಲಿ ಕುಳಿತುಕೊಳ್ಳಲಿ.ಅಲ್ಲೇ ಬುಕ್ ಬರೆದು, ಓದಲಿ.ಅವರಿಗೆ ಚಾಮುಂಡಿ ಬೆಟ್ಟಕ್ಕೆ ಹೆಚ್ಚಾಗಿ ಹೋಗುತ್ತಾರಲ್ಲ.ಅಲ್ಲೆ ಕುಳಿತು ಬುಕ್ ಓದಲಿ. ಅವರಿಗೂ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಅಲ್ಲವೇ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next