Advertisement

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

10:03 PM Mar 19, 2023 | Team Udayavani |

ಬೀದರ: ಚುನಾವಣೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Advertisement

ಔರಾದ ತಾಲೂಕಿನಲ್ಲಿ ಚುನಾವಣೆ ಕಾರ್ಯ ನಿರ್ವಹಣೆ ಹಾಗೂ ತರಬೇತಿ ಕೈಗೊಂಡಿದ್ದು, ಈ ಬಗ್ಗೆ ಔರಾದ ಪಂಚಾಯತ್‌ ರಾಜ್‌ ಉಪ ವಿಭಾಗದ ಎಫ್‌ಡಿಎ ವಿಠಲರಾವ್‌ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ರಾಜಕುಮಾರ ಅವರಿಗೆ ಮುಂಚಿತವಾಗಿ ತಿಳಿಸಿದರೂ ಯಾವುದೇ ಮುನ್ಸೂಚನೆ ನೀಡದೆ, ಮೇಲಾಧಿಕಾರಿಗಳ ಅನುಮತಿ ಪಡೆಯದೆ ತರಬೇತಿಗೆ ಗೈರಾಗಿದ್ದಾರೆ.

ಆ ಮೂಲಕ ಚುನಾವಣೆ ಕಾರ್ಯದಲ್ಲಿ ತೊಡಕುಂಟು ಮಾಡಿದ್ದಾರೆ. ಈ ಪ್ರಯುಕ್ತ ಇಬ್ಬರು ಅಧಿಕಾರಿಗಳನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಹಾಗೂ ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next