Advertisement
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಆದಷ್ಟು ಬೇಗ ಈ ಸಂವಿಧಾನಾತ್ಮಕ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು. ವಿಪಕ್ಷ ನಾಯಕನೇ ಇಲ್ಲದೇ ಸದನಕ್ಕೆ ಹಾಜರಾಗುವುದು ಅಥವಾ ಕಲಾಪದಲ್ಲಿ ಹೋರಾಟ ನಡೆಸುವುದು ಮುಜುಗರದ ವಾತಾವರಣ ಸೃಷ್ಟಿಸುತ್ತದೆ. ಈ ಬಾರಿಯೂ ಆಗದಿದ್ದರೆ ಬೆಳಗಾವಿ ಅಧಿವೇಶನಕ್ಕೆ ನಾವು ಗೈರಾಗಬೇಕಾಗುತ್ತದೆ. ಈ ಮಾಹಿತಿಯನ್ನು ನೀವು ವರಿಷ್ಠರಿಗೆ ರವಾನೆ ಮಾಡಿ ಎಂದು ಶಾಸಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.
Related Articles
Advertisement
ಶಾಸಕರು ನವೆಂಬರ್ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯದಿದ್ದರೆ ಬೆಳಗಾವಿ ಅವೇಶನಕ್ಕೆ ನಾವು ಹೋಗುವುದೇ ಇಲ್ಲ. ನಮ್ಮನ್ನು ಮುಜುಗರ ಮಾಡಬೇಕೆಂಬ ಉದ್ದೇಶ ರಾಷ್ಟ್ರೀಯ ನಾಯಕರಿಗಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಮರಳಿ ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ವರಿಷ್ಠರು ಪಂಚರಾಜ್ಯಗಳ ಚುನಾವಣೆಯಲ್ಲಿ ಮಗ್ನರಾಗಿದ್ದಾರೆ. ಎಲ್ಲವೂ ಸುಖಾಂತ್ಯವಾಗುತ್ತದೆ. ಸದ್ಯದಲ್ಲೇ ನಾನು ದೆಹಲಿಗೆ ತೆರಳಿ ವರಿಷ್ಠರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.