ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ನಲ್ಲಿ ಮೊಹಮ್ಮದ್ ಶಮಿ ಬಳಿ ಪ್ರೇಕ್ಷಕರು ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಬಗ್ಗೆ ನನಗೆ ತಿಳಿದಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
“ಶಮಿಗಾಗಿ ಜೈ ಶ್ರೀ ರಾಮ್ ಘೋಷಣೆಗಳ ಬಗ್ಗೆ ನನಗೆ ತಿಳಿದಿಲ್ಲ. ಅಲ್ಲಿ ಏನಾಯಿತು ಎಂದು ನನಗೆ ತಿಳಿದಿಲ್ಲ” ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಹೇಳಿದ್ದಾರೆ.
ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಮೊಹಮ್ಮದ್ ಶಮಿ ಬಳಿ ಕೆಲ ಪ್ರೇಕ್ಷಕರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ದೇಶದ ಮೊದಲ ʼಬಿರಿಯಾನಿ ಎಟಿಎಂʼ: ಏನಿದರ ವಿಶೇಷ?
ನಾಲ್ಕು ಪಂದ್ಯಗಳ ಬಾರ್ಡರ್- ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಮೊದಲೆರಡು ಪಂದ್ಯಗಳನ್ನ ಭಾರತ ಗೆದ್ದರೆ, ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಆಸೀಸ್ ಗೆಲುವು ಸಾಧಿಸಿತ್ತು. ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.