ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಕರೆತಂದಿದ್ದ ಯುವತಿ ಮೇಲೆ ಆಕೆಯ ಪ್ರಿಯಕರನೇ ತನ್ನ ನಾಲ್ವರು ಸ್ನೇಹಿತರ ಮೂಲಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಅಸ್ಸಾಂ ಮೂಲದ 20 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪ್ರಿಯಕರ ಶಾಹೀದ್ ಉದ್ದೀನ್ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾ ಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಕಳೆದ ವರ್ಷ ಆರೋಪಿ ಅಸ್ಸಾಂನ ಪಾರ್ಕ್ ವೊಂದರಲ್ಲಿ ಸಂತ್ರಸ್ತೆಯನ್ನು ಪರಿಚಯಿಸಿಕೊಂಡು ಪರಸ್ಪರ ಮೊಬೈಲ್ ಸಂಖ್ಯೆ ಬದಲಾಯಿಸಿಕೊಂಡಿದ್ದರು. ಬಳಿಕ ಇಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಹೀಗಾಗಿ ಆರೋಪಿ ಶಾಹೀದ್ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತೆಯನ್ನು ಕಳೆದ ಜೂನ್‌ನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಕರೆತಂದಿದ್ದ. ದೊಡ್ಡನಾಗಮಂಗಲದ ಬಾಡಿಗೆ ಮನೆಯಲ್ಲಿ ಇರಿಸಿ, ಸಂತ್ರಸ್ತೆಯ ವಿರೋಧದ ನಡುವೆಯೂ ಆಕೆ ಜತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಸಂಭೋಗದ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.
ವೇಶ್ಯಾವಾಟಿಕೆಗೆ ಇಳಿಸುವ ಉದ್ದೇಶ: ಈ ಮಧ್ಯೆ ಕೆಲ ದಿನಗಳ ಹಿಂದೆ ಆರೋಪಿ ಬೇರೆ ಮಹಿಳೆ ಜತೆ ಮದುವೆಯಾಗಿರುವುದು ಸಂತ್ರಸ್ತೆಗೆ ಗೊತ್ತಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಆಕೆಗೆ ಬೆಲ್ಟ್ನಿಂದ ಹೊಡೆದು ರೂಮ್‌ನಲ್ಲಿ ಹೂಡಿ ಹಾಕಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಮನೆಗೆ ಕರೆತಂದು ಸಂತ್ರಸ್ತೆ ಕೂಡಿ ಹಾಕಿದ್ದ ಕೋಣೆಗೆ ಕಳುಹಿಸಿ ಸಾಮೂಹಿಕ ಅತ್ಯಾಚಾರ ಎಸಗಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿಯಿಂದ ತಪ್ಪಿಸಿಕೊಂಡು ಬಂದ ಸಂತ್ರಸ್ತೆ ತನ್ನ ಪ್ರಿಯಕರ ಸೇರಿ ಐವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ವೇಶ್ಯಾವಾಟಿಕೆ ದಂಧೆಗೆ ಇಳಿಸುವ ಉದ್ದೇಶ ದಿಂದ ಆರೋಪಿ ಶಾಹೀದ್ ಸಂತ್ರಸ್ತೆಯನ್ನು ಪ್ರೀತಿಸುವ ನಾಟಕವಾಗಿ ಮದುವೆಯಾಗು ವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಕರೆತಂದಿರುವುದು ಗೊತ್ತಾಗಿದೆ. ಆರೋಪಿಗಳಿ ಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.