Advertisement

ದುರುಪಯೋಗ ಮತ್ತೊಮ್ಮೆ ಸಾಬೀತು: ಕೋನರೆಡ್ಡಿ

11:47 AM Mar 29, 2019 | Lakshmi GovindaRaju |

ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ, ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಭಾಗದಲ್ಲಿ ಆದಾಯ ತೆರಿಗೆ ದಾಳಿ ಮಾಡಿಸುವ ಮೂಲಕ ಎನ್‌ಡಿಎ ಸರ್ಕಾರ ಪ್ರಾದೇಶಿಕ ಪಕ್ಷ ಜೆಡಿಎಸ್‌ನ ಗೆಲುವು ಕಟ್ಟಿಹಾಕುವ ಕೆಲಸ ಮಾಡುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ಐಟಿ ದಾಳಿ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next