Advertisement

ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ಎಬಿವಿಪಿ ಆಗ್ರಹ

05:17 PM Sep 02, 2018 | Team Udayavani |

ಚಿಕ್ಕೋಡಿ: ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿದ್ಯಾರ್ಥಿ ವೇತನ ಹಾಗೂ ಫೆಲೋಶಿಪ್‌ಗ್ಳನ್ನು ಕೇಂದ್ರ ಮತ್ತು ರಾಜ್ಯ ಸರಕಾರ ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಪಟ್ಟಣದ ಸುತ್ತಮುತ್ತ ಹಳ್ಳಿಗಳ ಮಾರ್ಗಗಳಿಗೆ ಹೆಚ್ಚಿನ ಬಸ್‌ ಸೌಲಭ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಪಟ್ಟಣದ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದ ಸಂಘಟನೆ ಸದಸ್ಯರು ಅಲ್ಲಿಂದ ಎನ್‌.ಎಂ. ರಸ್ತೆ ಮಾರ್ಗವಾಗಿ ಬಸ್‌ ನಿಲ್ದಾಣವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

Advertisement

ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ಸರಕಾರ ಶೀಘ್ರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಕೇಂದ್ರ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ನಗರಕ್ಕೆ ಸುತ್ತಮುತ್ತಲಿನ ಸಾವಿರಾರು ಮಕ್ಕಳು ಶಿಕ್ಷಣ ಪಡೆಯಲು ಚಿಕ್ಕೋಡಿಗೆ ಆಗಮಿಸುತ್ತಾರೆ. ಆದರೆ ವಿದ್ಯಾರ್ಥಿಗಳು ಸೂಕ್ತ ಬಸ್‌ ಸೌಲಭ್ಯ ವಿಲ್ಲದೇ ಪರದಾಡುತ್ತಿದ್ದಾರೆ. ರಾಯಬಾಗ, ಕರೋಶಿ, ಕಬ್ಬೂರ, ಯಕ್ಸಂಬಾ, ನಿಡಸೋಶಿ, ನಿಪ್ಪಾಣಿ ಮತ್ತು ಶಿರಗುಪ್ಪಿ ಮಾರ್ಗಗಳಿಗೆ ಹೆಚ್ಚಿನ ಬಸ್‌ ಬಿಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಈಗ ಬಿಡುವ ಬಸ್‌ಗಳಲ್ಲಿ ನಿರ್ವಾಹಕರು ವಿದ್ಯಾರ್ಥಿಗಳ ಜೊತೆ ಅನುಚಿತ ವರ್ತನೆ ಮಾಡುತ್ತಾರೆ. ಬಸ್‌ ನಿಲ್ಲಿಸಬೇಕೆಂದು ಮನವಿ ಮಾಡಿದರೂ ಚಾಲಕ ನಿರ್ವಾಹಕರು ವಿದ್ಯಾರ್ಥಿಗಳಿಗೆ ಏಕವಚನದಲ್ಲಿ ನಿಂದನೆ ಮಾಡುತ್ತಿರುವುದು ನಿಲ್ಲಬೇಕೆಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ನಿಲಪ್ಪ ಶಿವಾನಿ, ಈರಣ್ಣಾ ಈಟಿ, ಶೈಲಾ ದುರ್ಗಾಭವಾನಿ, ವಸಂತ ನಾಗರಾಳೆ, ಪೂಜಾ ನಿರ್ಲಗಿ, ಸಮರ್ಥ ಮೋರೆ, ಜಿ.ಬಿ. ಮಾಳಗಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next