Advertisement

ಪ್ರವೀಣ ಹತ್ಯೆ: ಗೃಹ ಸಚಿವರ ನಿವಾಸಕ್ಕೆ ನುಗ್ಗಿ ದಾಂಧಲೆ ಮಾಡಿದ ಎಬಿವಿಪಿ‌ ಕಾರ್ಯಕರ್ತರು

11:24 AM Jul 30, 2022 | Team Udayavani |

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ ಹತ್ಯೆ ಹಾಗೂ ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಗೃಹ ಸಚಿವರ ಮನೆ ಬಾಗಿಲು ಮುರಿದು ಒಳ‌ನುಗ್ಗುವುದಕ್ಕೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Advertisement

ಈ ಮಧ್ಯೆ ಸಂಸದ ತೇಜಸ್ವಿ ಸೂರ್ಯ ಕಚೇರಿ ಮುಂದೆ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಧರಣಿ ನಡೆದಿದೆ. ಹೂಗಳ ಜೊತೆ ಪ್ರತಿಭಟನೆಗೆ ಬಂದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ತೇಜಸ್ವಿ ಸೂರ್ಯ ಮಾತನಾಡಿದ್ದರು. ಇದನ್ನ ಖಂಡಿಸಿ ಗುಲಾಬಿ ಹೂ ತಂದಿದ್ದೆವು. ಗುಲಾಬಿ ನೀಡಿ ‌ಧರಣಿ ಮಾಡಲು ಬಂದೆವು ಎಂದ ಕಾರ್ಯಕರ್ತರು ವ್ಯಂಗ್ಯವಾಡಿದರು.

ಇದನ್ನೂ ಓದಿ:2021-22ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ರ‍್ಯಾಂಕ್ ಬಂದವರ ವಿವರ

ಆದರೆ ಗೃಹ ಸಚಿವ ಅರಗ ಜ್ಙಾನೇಂದ್ರ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ನಡೆಸಿದ ಧರಣಿ ಸ್ವಲ್ಪ ವಿಕೋಪಕ್ಕೆ ತಿರುಗಿತು. ಬೆಂಗಳೂರಿನ ಜಯಮಹಲ್ ನಲ್ಲಿರುವ ನಿವಾಸಕ್ಕೆ 9.40ರ ಸುಮಾರಿಗೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು ಹೂಕುಂಡಗಳನ್ನು ಒಡೆದು ಹಾಕಿದರು.

Advertisement

ಸ್ಥಳಕ್ಕೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು 40 ಜನರನ್ನು ವಶಕ್ಕೆ ಪಡೆಯಲಾಗಿದೆ.

ಸದಾನಂದಗೌಡರ ನಿವಾಸದ ಮುಂದೆಯೂ ಪ್ರತಿಭಟನೆ ನಡೆಸಲಾಗಿದೆ. ಹೆಬ್ಬಾಳ ಮಂಡಳ ಅಧ್ಯಕ್ಷ ರಿಷಿ ಕುಮಾರ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೂ ಪ್ರತಿಭಟನೆ ಬಿಸಿ ಎದುರಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next