Advertisement

ವಿಜಯಪುರ : ಎಸ್.ಡಿ.ಪಿ.ಐ, ಪಿಎಫ್ಐ ನಿಷೇಧಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

01:54 PM Jul 30, 2022 | Team Udayavani |

ವಿಜಯಪುರ : ಎಸ್.ಡಿ.ಪಿ.ಐ, ಪಿಎಫ್ಐ ಸೇರಿದಂತೆ ಮುಸ್ಲಿಂ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಬಸವನಬಾಗೇವಾಡಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವೇಶ್ವರ ಕಾಲೇಜಿನಿಂದ ಮಿನಿ ವಿಧಾನಸೌಧದ ವರೆಗೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ
ಗ್ರಹ ಸಚಿವರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಕೊಲೆಯಾಗುತ್ತಿದೆ, ಶಿವಮೊಗ್ಗದ ಹರ್ಷ ಕೊಲೆ ಮಾಸುವ ಮುನ್ನವೇ ಮಂಗಳೂರಿನ ಪ್ರವೀಣ ನೆಟ್ಟಾರು ಹತ್ಯೆಯಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಗೃಹ ಇಲಾಖೆ, ಸಚಿವರು ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಿನಿ ವಿಧಾನಸೌಧಕ್ಕೆ ತೆರಳಿ, ತಹಶೀಲ್ದಾರ ವಿಜಯಕುಮಾರ ಕಡಕೋಳ ಅವರಿಗೆ ಮನವಿ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next