Advertisement

ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚಿನ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

03:59 PM Dec 20, 2022 | Team Udayavani |

ಉಳ್ಳಾಲ: ಮಂಗಳೂರು ವಿ.ವಿ ಫಲಿತಾಂಶ ವಿಳಂಬ ಮತ್ತು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ  ಮಂಗಳಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ವಿವಿ ಆಡಳಿತ ಸೌಧದಲ್ಲಿ‌ ಮಂಗಳವಾರ ನಡೆಯುತ್ತಿದ್ದ ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಪೊಲೀಸರು ಕಾರ್ಯಕರ್ತರನ್ಬು ಆಡಳಿತ ಸೌಧದ ಆವರಣದಲ್ಲೇ ತಡೆದಿದ್ದು, ಈ ಸಂದರ್ಭದಲ್ಲಿ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆಯಿತು. ಬಳಿಕ ಕಾರ್ಯಕರ್ತರು ಆವರಣದ ಎದುರೇ ಪ್ರತಿಭಟನೆ ನಡೆಸಿದರು.

Advertisement

ಸುಮಾರು 500 ರಷ್ಟಿದ್ದ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರ ತಡೆದಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ನುಗ್ಗಲು ಯತ್ನಿಸಿ ವಿವಿ ವಿರುದ್ದ ಘೋಷಣೆಗಳನ್ನು ಕೂಗಿದರು.

ಮಂಗಳೂರು ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿ ವಿದ್ಯಾರ್ಥಿ ನಾಯಕರೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ: ಎರಡನೇ ಹಾಡು ರಿಲೀಸ್‌ ಗೆ ʼಪಠಾಣ್‌ʼ ರೆಡಿ: ಮತ್ತೆ ಬೋಲ್ಡ್‌ ಲುಕ್‌ ನಲ್ಲಿ ಕಾಣಿಸಿಕೊಂಡ ದೀಪಿಕಾ

ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು, ಎಲ್ಲ ಸಮಸ್ಯೆಗಳು ಒಂದು ಕಡೆಯಾದರೆ ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಚೆಲ್ಲಾಟವಾಡುತ್ತಿದೆ. ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದರು.

Advertisement

ವಿದ್ಯಾರ್ಥಿಗಳ ಆರೋಪಕ್ಕೆ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಅವರು ಮಾತನಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆ ಆಗ್ರಹಿಸುತ್ತಿದ್ದು ಆ ಕಾರಣದಿಂದ ನನ್ನಿಂದ ಸಮಸ್ಯೆ ಆಗಿದ್ದು ಪರಿಹಾರ ದೊರಕೋದಾದ್ರೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ರಾಜೀನಾಮೆ ಪತ್ರ ಬರೆದು ಸಿದ್ಧನಾಗಿಯೇ ಬಂದಿದ್ದೇನೆ ಎಂದರು.

ವಿದ್ಯಾರ್ಥಿಗಳು ವಾಸ್ತವ ಅರ್ಥಮಾಡಿಕೊಂಡಿಲ್ಲ. ಒಂದು ದಿವಸ ರಜೆ ಹಾಕದೆ ನನ್ನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರೋದು.ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ, ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ ಎಂದರು.

ಜ.25ರೊಳಗೆ ಫಲಿತಾಮನಶದ ಭರವಸೆ : ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಿದ್ದು, ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂದೆ ಸರಿದರು.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಕುಲಗೇರಿ,ತಾಲೂಕು ಸಂಚಾಲಕ ಆದರ್ಶ್ ಉಪ್ಪಾರ ,ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next