ನಗರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳ ಜತೆ ಶುಕ್ರವಾರ ಪುತ್ತೂರು ಸಹಾಯಕ ಕಮಿಷನರ್ ಪೂರ್ವಸಿದ್ಧತಾ ಸಭೆ ನಡೆಸಿದರು.
ಮಿನಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಎಸಿ ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ಚುನಾವಣೆ ಹೊಸ್ತಿಲಲ್ಲಿ ಇರುವುದರಿಂದ ಇಲಾಖಾವಾರು ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದ ಸಿದ್ಧತೆ ನಡೆಸಿಕೊಳ್ಳಬೇಕು. ಯಾವುದೇ ರಾಜಕೀಯ, ಜನಪ್ರತಿನಿಧಿಗಳ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸುವುದು ಬೇಡ. ಅನಿವಾರ್ಯದ ಸಂದರ್ಭಸಹಾಯಕ ಕಮೀಷನರ್ ಅನುಮತಿ ಪಡೆದು
ಕೊಳ್ಳಬೇಕು ಎಂದು ಸೂಚನೆ ನೀಡಿದರು.
ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವ ತನಕ ಚುನಾವಣೆಗೆ ಸಂಬಂಧಿಸಿದ ಪೂರ್ವ ಕೆಲಸಗಳಿಗೆ ಗಮನಹರಿಸಬೇಕು. ಮತದಾರ ಪಟ್ಟಿ ಸಿದ್ಧಪಡಿಸುವ, ತಿದ್ದುಪಡಿ ಇತ್ಯಾದಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಮತದಾರರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು. ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು. ತಹಶೀಲ್ದಾರ್ ಅನಂತಶಂಕರ್, ತಾ. ಪಂ. ಇಒ ಜಗದೀಶ್ ಎಸ್., ಉಪ ತಹಶೀಲ್ದಾರ್ ಶ್ರೀಧರ್ ಕೋಡಿಜಾಲ್ ಉಪಸ್ಥಿತರಿದ್ದರು.