Advertisement
ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಟಾಸ್ Rಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಮೊದಲ ಒಂದು ತಿಂಗಳು ಚಿಕ್ಕಮಗಳೂರು ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿತ್ತು. ಲಾಕ್‌ಡೌನ್‌ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಪುನಃ ಇಂತಹ ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಸರಕಾರ ಹಲವಾರು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ನಮ್ಮ ಕೆಲಸ ನಿರ್ವಹಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಮಾರ್ಷಲ್‌ಗಳನ್ನು ನೇಮಕ ಮಾಡಲಾಗಿದೆ. ದಂಡ ವಿಧಿ ಸುವುದು ಅವರಲ್ಲಿ ಅರಿವು ಮೂಡಿಸುವ ಕಾರಣಕ್ಕಾಗಿ. ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು ಸರಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು. ಜನಸಾಮಾನ್ಯರ ಹಿತದೃಷ್ಟಿಯಿಂದ ಕೆಲವು ಕಠಿಣ ನಿಯಮಗಳನ್ನು ನಾವು ಪಾಲಿಸಬೇಕಾಗಿದೆ ಎಂದರು.
Related Articles
Advertisement
45 ವರ್ಷ ಮೇಲ್ಪಟವರನ್ನು ಗುರುತಿಸಲಾಗಿದ್ದು ಇಲ್ಲಿಯ ತನಕ 4161 ಜನರಿಗೆ ಲಸಿಕೆ ನೀಡಲಾಗಿದೆ. 63000 ಜನರಿಗೆ ಲಸಿಕೆ ನೀಡಬೇಕಾಗಿದೆ. ಮೊದಲ ಲಸಿಕೆ ಪಡೆದವರು 6 ವಾರದ ನಂತರ ಎರಡನೇ ಲಸಿಕೆ ಪಡೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 39 ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಜನರು ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್ ಸಿ.ಜಿ. ಗೀತಾ ಮಾತನಾಡಿ, ಏರುಗತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ.
ಈ ಹಿನ್ನಲೆಯಲ್ಲಿ ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಟೆಸ್ಟ್‌ಗಳನ್ನು ಹೆಚ್ಚಾಗಿ ಮಾಡಬೇಕಾಗಿದೆ. ಮಾರ್ಷಲ್‌ಗಳನ್ನು ನೇಮಕ ಮಾಡಿದ್ದು ದಿನನಿತ್ಯದ ವರದಿಯನ್ನು ಸಂಜೆಯೊಳಗೆ ನೀಡಬೇಕು. ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಇಲಾಖೆಯ ಅಧಿ ಕಾರಿಗಳು ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾ ಧಿಸಿ ಕೆಲಸ ನಿರ್ವಹಿಸಬೇಕಾಗಿದೆ ಎಂದರು. ಸಭೆಯಲ್ಲಿ ಡಿವೈಎಸ್‌ಪಿ ಏಗನಗೌಡರ್, ಇಒ ದೇವೇಂದ್ರಪ್ಪ ಇಲಾಖಾ ಅಧಿ ಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅ ಧಿಕಾರಿಗಳು ಇದ್ದರು.