Advertisement

ಅಕಾಡೆಮಿ, ಪ್ರಾಧಿಕಾರವಾಗಲಿ: ಮಾಲಗತ್ತಿ

06:22 AM Mar 10, 2019 | Team Udayavani |

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯನ್ನು ಕರ್ನಾಟಕ ಸಾಹಿತ್ಯ ಪ್ರಾಧಿಕಾರ ಎಂದು ಮರುನಾಮಕರಣ ಮಾಡಬೇಕು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಅರವಿಂದ ಮಾಲಗತ್ತಿ ಸರ್ಕಾರಕ್ಕೆ ಒತ್ತಾಯಿಸಿದರು.

Advertisement

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಅಕಾಡೆಮಿ ಎಂಬುದು ಆಂಗ್ಲ ಪದ, ಕನ್ನಡದ ಪದ ಬಳಕೆ ಇರಬೇಕು. ಜತೆಗೆ, ಪ್ರಾಧಿಕಾರಕ್ಕೆ ಸಿಗುವ ಆರ್ಥಿಕ ಸೌಲಭ್ಯಗಳೂ ಸಿಗಬೇಕು. ಹೀಗಾಗಿ, ಪ್ರಾಧಿಕಾರ ಎಂಬ ಹೆಸರು ನಾಮಕರಣ ಮಾಡುವುದು ಸೂಕ್ತ ಎಂದರು.

ಅಕಾಡೆಮಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಪ್ರಶಸ್ತಿಗಳ ಮೊತ್ತ ಹೆಚ್ಚಿಸಬೇಕು. ಸಾಹಿತ್ಯ ಅಕಾಡೆಮಿಗೆ ಯೋಜನೆಗಳನ್ನು ಮುಂದುವರಿಸಲು ಹೆಚ್ಚಿನ ಹಣದ ಅವಶ್ಯಕತೆಯಿದೆ. ಇಂದು ಗಂಭೀರ ಸಾಹಿತ್ಯಕ್ಕೆ ಸಿಗುವ ಮನ್ನಣೆ ಜನಪ್ರಿಯ ಸಾಹಿತ್ಯಕ್ಕೆ ಲಭಿಸುತ್ತಿಲ್ಲ. ಜನಪ್ರಿಯ ಸಾಹಿತ್ಯ ಓದುಗರ ವರ್ಗವನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಮಾತನಾಡಿ, ಪ್ರೊ. ಪಿ.ವಿ. ನಂಜರಾಜ ಅರಸು ಅವರು, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮನ್ನಣೆ ಸಿಗುತ್ತಿಲ್ಲ. ಕನ್ನಡ ಭಾಷೆಯ ಬಗ್ಗೆ ರಾಜ್ಯ ಸರ್ಕಾರವು ಯಾವುದೇ ಗಮನಹರಿಸುತ್ತಿಲ್ಲ. ಸಚಿವರನ್ನು ಕಾರ್ಯಕ್ರಮಕ್ಕೆ ಕರೆದರೂ ಬರಲಿಲ್ಲ. ಇದರಿಂದ ಸರ್ಕಾರದ ಬಗ್ಗೆ ಕಾಳಜಿ ಎಷ್ಟಿದೆ ಎಂದು ತಿಳಿಯುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.

ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ವಿಧಾನಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್‌.ಅನಿಲ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ. ಎಂ.ಜಾನಕಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next