Advertisement

ಸಿಎಸ್‌ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು

11:54 AM Jun 13, 2018 | |

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿವೃತ್ತ ನೌಕರ ಶಂಕರ ದೇವೇಗೌಡ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮಂಗಳವಾರ ದೂರು ನೀಡಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆಯಲ್ಲಿ 62 ಜನರಿಗೆ ಹಿಂಬಡ್ತಿ ನೀಡಿ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಮತ್ತು ಹೈಕೋರ್ಟ್‌ ಅದೇಶಿಸಿತ್ತು.

Advertisement

ಆದರೆ, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಈ ತೀರ್ಪಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಹೈಕೋರ್ಟ್‌ ಆದೇಶ ಜಾರಿಗೊಳಿಸದಂತೆ ಇಲಾಖೆಯ ಅಧಿಕಾರಿಗಳಿಗೆ ಒತ್ತಡ ಹಾಕಿದ್ದಾರೆ ಎಂದು ಶಂಕರ ದೇವೇಗೌಡ ಆರೋಪಿಸಿದ್ದಾರೆ. ದೂರು ಸ್ವೀಕರಿಸಿದ ಅಧಿಕಾರಿಗಳು ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next